Wednesday, January 22, 2025

ಡಿ. 27 ರಂದು ಕನ್ನಡಕ್ಕಾಗಿ ಕರವೇ ಪ್ರತಿಭಟನೆ!

ದೇವನಹಳ್ಳಿ : ರಾಜ್ಯದಲ್ಲಿ ಕನ್ನಡ ಭಾಷೆ ಸೂಕ್ತ ರೀತಿಯಲ್ಲಿ ಬಳಕೆಯಾಗಿತ್ತಿಲ್ಲ ಎಂದು ಇದೇ ಡಿ.27ಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕರವೇ ರಾಜ್ಯ ಪ್ರಧಾನ ಸಂಚಾಲಕ ಬಿ.ಕೆ. ನಾರಾಯಣಸ್ವಾಮಿ ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಇದೇ ತಿಂಗಳು 27 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ರಾಜ್ಯದಲ್ಲಿ ಕನ್ನಡ ಸೂಕ್ತ ರೀತಿಯಲ್ಲಿ ಬಳಕೆ ಮಾಡುತ್ತಿಲ್ಲ ಎಂದು ಕರವೇ ಪ್ರತಿಭಟನೆ ನಡೆಸಲಿದೆ.

ಇದನ್ನೂ ಓದಿ: ಪ್ರೇಮಿಗಳು ಪರಾರಿ​​​: ಯುವಕನ ತಂದೆ ಮೇಲೆ ಮಾರಣಾತಿಕ ಹಲ್ಲೆ!

ಪ್ರತಿಭಟನೆ ಮೂಲಕ ಉದ್ಯಮಿಗಳಿಗೆ, ವ್ಯಾಪಾರಸ್ಥರಿಗೆ ಶೇ 70 ಕನ್ನಡ ಬಳಕೆ ಮಾಡಲು ಎಚ್ಚರಿಕೆ ನೀಡಲು ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. 27 ರಂದು ದೇವನಹಳ್ಳಿ ತಾಲ್ಲೂಕಿನ ಸಾದಹಳ್ಳಿ ಗೇಟ್ ನಿಂದ ಸಾವಿರಾರು ಕರವೇ ಕಾರ್ಯಕರ್ತರು ಸೇರಿ ಕಾಲ್ನಡಿಗೆ ಮೂಲಕ ಬೆಂಗಳೂರು ಕಬ್ಬನ್ ಪಾರ್ಕ್ ವರೆಗೆ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಇತ್ತೀಚೆಗೆ ರಾಜ್ಯದಲ್ಲಿ ಕನ್ನಡ ಭಾಷೆ ಮೇಲೆ ನಿರ್ಲಕ್ಷ್ಯ ತೋರಲಾಗುತ್ತಿದೆ ಇದನ್ನ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES