ನವದೆಹಲಿ: WFI(Wrestling Federation Of India)ದ ನೂತನ ಅಧಕ್ಷರಾಗಿ ಬ್ರಿಜ್ ಭೂಷಣ್ ಆಯ್ಕೆಯಾದ ಬೆನ್ನಲ್ಲೆ ಖ್ಯಾತ ಕುಸ್ತಿಪಟು ಹಾಗು ಒಲಿಂಪಿಕ್ಸ್ ಪದಕ ವಿಜೇತೆ ಸಾಕ್ಷಿ ಮಲಿಕ್ ಕ್ರೀಡಾ ಜೀವನಕ್ಕೆ ವಿದಾಯ ಹೇಳಿದ್ದಾರೆ.
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತದ ಕುಸ್ತಿ ಫೆಡರೇಷನ್‌ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಇಂದು ಫೆಡರೇಷನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಾಕ್ಷಿ ಮಲಿಕ್ ಈ ನಿರ್ಧಾರಕ್ಕೆ ಬಂದಿದ್ದಾರೆ.
ಇದನ್ನೂ ಓದಿ: ವ್ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾದ ನೂತನ ಅಧ್ಯಕ್ಷರಾಗಿ ಸಂಜಯ್ ಸಿಂಗ್ ಆಯ್ಕೆ!
ಚುನಾವಣೆ ಫಲಿತಾಂಶ ಹೊರಬಿದ್ದ ನಂತರ ಪ್ರತಿಕ್ರಿಯಿಸಿದ ಪ್ರಮುಖ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಮಹಿಳಾ ಕುಸ್ತಿಪಟುಗಳು ಕಿರುಕುಳ ಎದುರಿಸುವುದು ಮುಂದುವರಿಯಲಿದೆ ಎಂದು ಇಂದಿನ ಚುನಾವಣಾ ಫಲಿತಾಂಶ ಸೂಚಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಂಜಯ್ ಸಿಂಗ್ ಅವರು ಫೆಡರೇಷನ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ಮಹಿಳಾ ಕುಸ್ತಿಪಟುಗಳು ನಿರಂತರ ಕಿರುಕುಳ ಎದುರಿಸುವುದು ಮುಂದುವರಿಯಲಿದೆ, ಎಂದು ವಿನೇಶ್ ಫೋಗಟ್ ದುಃಖತಪ್ತರಾಗಿ ಹೇಳಿದರು.