Sunday, December 22, 2024

ಕೇರಳದಲ್ಲಿ ಕೋವಿಡ್ ಪ್ರಕರಣ ಏರಿಕೆ, ಮೂವರು ಸಾವು!

ಕೇರಳ: ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡಿದ್ದು, 300 ಜನರಲ್ಲಿ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಕೇರಳದ ಸಕ್ರಿಯ ಪ್ರಕರಣಗಳ ಸಂಖ್ಯೆ 2,341ಕ್ಕೆ ಏರಿದೆ. ಒಂದು ದಿನದ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 358 ಪ್ರಕರಣಗಳು ವರದಿಯಾಗಿದ್ದು, ಮೂವರು ಮೃತಪಟ್ಟಿದ್ದಾರೆ. ದೇಶದಾದ್ಯಂತ ಸಕ್ರಿಯ ಪ್ರಕರಣಗಳ ಸಂಖ್ಯೆ 2,669ಕ್ಕೆ ತಲುಪಿದೆ. ಕೋವಿಡ್​ ಸಾಂಕ್ರಾಮಿಕ ತೀವ್ರಗೊಳ್ಳುತ್ತಿದ್ದಂತೆಯೇ ಕೇಂದ್ರ ಆರೋಗ್ಯ ಸಚಿವಾಲಯ, ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ರಾಜ್ಯಗಳಿಗೂ ಈ ಕುರಿತು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ನಂದಿನಿ ಬ್ರಾಂಡ್​ ಹೊಸ ಉತ್ಪನ್ನಗಳ ಲೋಕಾರ್ಪಣೆ: ರಾಯಭಾರಿ ಶಿವಣ್ಣನಿಗೆ ಸನ್ಮಾನ!

ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ನಡುವಿನ ಜಂಟಿ ಪ್ರಯತ್ನಗಳ ಮಹತ್ವವನ್ನು ಒತ್ತಿಹೇಳಿದ್ದಾರೆ. ಜತೆಗೆ ಟೆಸ್ಟಿಂಗ್ ಹೆಚ್ಚಿಸುವಂತೆ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES