Friday, December 27, 2024

ವಾತಾವರಣದಲ್ಲಿ ಏರುಪೇರು ಚಳಿ ಪ್ರಮಾಣ ಹೆಚ್ಚಳ : ಹವಾಮಾನ ಇಲಾಖೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಹೆಚ್ಚಿದೆ. ಜನರಿಗೆ ಧನುರ್‌ ಮಾಸದ ಚಳಿಯ ಅನುಭವ ಶುರುವಾಗಿದೆ. ಮತ್ತೊಂದೆಡೆ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ.

ಡಿ.21 ರಿಂದ 26ರ ವರೆಗೆ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ
ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ, ಜೀಪಿಗೆ ಲಾರಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವು

ಇನ್ನು ಮಳೆಯ ಮುನ್ಸೂಚನೆ ಇಲ್ಲ ಆದರೂ ರಾಜ್ಯದ ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆ ಆಗಲಿದ್ದು ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ.

RELATED ARTICLES

Related Articles

TRENDING ARTICLES