Thursday, January 16, 2025

ನಂದಿನಿ ಬ್ರಾಂಡ್​ ಹೊಸ ಉತ್ಪನ್ನಗಳ ಲೋಕಾರ್ಪಣೆ: ರಾಯಭಾರಿ ಶಿವಣ್ಣನಿಗೆ ಸನ್ಮಾನ!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್‌ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್‌ ರಾಯಭಾರಿ ಶಿವರಾಜ್‌ ಕುಮಾರ್‌ ಅವರ ಜಾಹೀರಾತನ್ನು ಬಿಡುಗಡೆ ಮಾಡಿದರು.

ನಂದಿನಿ ಬ್ರ್ಯಾಂಡ್​ಗೆ ರಾಯಭಾರಿಯಾಗಲು ನಟ ಶಿವರಾಜ್​ಕುಮಾರ್​ ಕೂಡ ಯಾವುದೇ ಸಂಭಾವನೆ ಪಡೆಯುತ್ತಿಲ್ಲ. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಶಿವಣ್ಣ, ಇದು ನಮ್ಮ ಸರ್ಕಾರದ್ದು, ನಮ್ಮ ಪ್ರಾಡೆಕ್ಟ್. ನಾವು ನಮ್ಮ ರೈತರಿಗೋಸ್ಕರ ಯಾವಾಗಲು ಜೊತೆಯಲ್ಲಿರುತ್ತೇನೆ. ಇದು ನಮ್ಮ ತ್ಯಾಗ ಅಲ್ಲ ನಮ್ಮ ಕರ್ತವ್ಯ ಎಂದು ನಟ ಶಿವರಾಜ್​ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಹೆಣ್ಣು ಸಿಗದೆ ಅನಾಥಾಶ್ರಮದ ಯುವತಿರೊಂದಿಗೆ ಮದುವೆಯಾದ ಬ್ರಾಹ್ಮಣ ಯುವಕರು!

ಈ ಹಿಂದೆ ದಿವಂಗತ ಪುನೀತ್ ರಾಜಕುಮಾರ್ ಕೆಎಂಎಫ್​ ರಾಯಭಾರಿಯಾಗಿದ್ದರು. ಇದೀಗ ಶಿವರಾಜ್ ಕುಮಾರ್ ಅವರನ್ನ ನಂದಿನಿ ಹಾಲಿನ ಉತ್ಪನ್ನಗಳ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ನಟ ಶಿವರಾಜ್ ಕುಮಾರ್​ಗೆ ಹೂಗುಚ್ಚ ನೀಡಿ ಸನ್ಮಾನಿಸಲಾಯಿತು.

ಈ ಸಮಾರಂಭದಲ್ಲಿ ಶ್ರೀಮತಿ ಗೀತಾ ಶಿವರಾಜ್‌ ಕುಮಾರ್‌, ಸಚಿವ ಮಧು ಬಂಗಾರಪ್ಪ, ಕೆ.ಎಂ.ಎಫ್‌ ಅಧ್ಯಕ್ಷ ಭೀಮಾ ನಾಯ್ಕ್‌ ಮೊದಲಾದವರು ಭಾಗವಹಿಸಿದ್ದರು.

RELATED ARTICLES

Related Articles

TRENDING ARTICLES