ನವದೆಹಲಿ: ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾರ ಇಂದು ಬೆಳಿಗ್ಗೆ 11 ಗಂಟೆಗೆ ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ.
ಕಳೆದ ವಾರ ಪ್ರಧಾನಿ ಅವರನ್ನು ಭೇಟಿಯಾಗಬೇಕಿತ್ತು. ಆದರೆ, ಸಾಧ್ಯವಾಗಿರಲಿಲ್ಲ. ಗುರುವಾರ ಭೇಟಿ ಮಾಡಿ ಚರ್ಚಿಸುತ್ತೇನೆ. ಇದೊಂದು ಸೌಜನ್ಯದ ಭೇಟಿ’ ಎಂದು ಕುಮಾರಸ್ವಾಮಿ ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಸೀಟು ಹಂಚಿಕೆ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಮಾಲೋಚನೆ ನಡೆಸಲಾಗುತ್ತದೆ. ಆದಷ್ಟು ಶೀಘ್ರದಲ್ಲಿ ಸೀಟು ಹಂಚಿಕೆ ಅಂತಿಮಗೊಳಿಸಲು ಯೋಜಿಸಲಾಗಿದೆ ಎಂದರು.