ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಇನ್ನೊಂದು ಬಲಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕೋವಿಡ್ ಸೋಂಕಿನಿಂದಾಗಿ 40 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ, ವೆನ್ಲಾಕ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎರಡು ದಿನಗಳ ಹಿಂದೆಯಷ್ಟೇ ಈ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ದೃಢವಾಗಿತ್ತು.
ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ
ರಾಜ್ಯಕ್ಕೆ ಕೊರೊನಾ ಮತ್ತೆ ವಕ್ಕರಿಸಿದೆ. ಅರದಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆರ್ಭಟಿಸಿದೆ. ಮತ್ತೆ 10 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಆತಂಕ ಮೂಡಿಸಿದೆ. ನಿನ್ನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 200 ಮಂದಿಗೆ ಟೆಸ್ಟ್ ಮಾಡಲಾಗಿತ್ತು. ಅವರಲ್ಲಿ 10 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಕೊರೊನಾ ಸಾಂಕ್ರಾಮಿಕ ನಿಯಂತ್ರಣಕ್ಕೆ ನಾವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಈ ಬಗ್ಗೆ ಯಾರೊಬ್ಬರೂ ಆತಂಕಪಡಬೇಕಾದ ಅಗತ್ಯವಿಲ್ಲ.
ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧಗಳಿರುವುದಿಲ್ಲ. ಗುಂಪು ಸೇರುವ ಸಂದರ್ಭದಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ.
ಸಂಭ್ರಮದ ಜೊತೆಗೆ ನಿಮ್ಮ ಆರೋಗ್ಯದ… pic.twitter.com/jzJDVbVe9n
— CM of Karnataka (@CMofKarnataka) December 21, 2023