ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ ಹತ್ತು ಸರ್ಕಾರಿ ಆಸ್ಪತ್ರೆಗಳ ಮೇಲೆ ಅವ್ಯವಹಾರ ಹಾಗೂ ಅಕ್ರಮ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ.
ನೆಲಮಂಗಲ, ಯಲಹಂಕ, ಕೆಆರ್ ಪುರಂ, ಜಯನಗರ, ಕೆಸಿ ಜನರಲ್ ಆಸ್ಪತ್ರೆ, ಸಂಜಯ್ ಗಾಂಧಿ ಆಸ್ಪತ್ರೆ, ಇಂದಿರಾಗಾಂಧಿ ಆಸ್ಪತ್ರೆ, ರಾಜೀವ್ ಗಾಂಧಿ ಆಸ್ಪತ್ರೆ, ಗೌಸಿಯಾ ಆಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಮಹಿಳಾ ಕಾನ್ಸ್‌ಟೇಬಲ್ ಕಾಲ್ ಡಿಟೇಲ್ ರೆಕಾರ್ಡ್ ಮಾರಿದ ಪೊಲೀಸರು!
ಪೊಲೀಸ್ ಮಹಾನಿರ್ದೇಶಕ (ಲೋಕಾಯುಕ್ತ) ಪ್ರಶಾಂತ್ ಕುಮಾರ್ ಠಾಕೂರ್ ಅವರು ಕೆಸಿ ಜನರಲ್ ಆಸ್ಪತ್ರೆ ಮತ್ತು ಯಲಹಂಕ ಸಾರ್ವಜನಿಕ ಆಸ್ಪತ್ರೆಯನ್ನು ಪರಿಶೀಲಿಸಿದರು. ಪೊಲೀಸ್ ಮಹಾನಿರೀಕ್ಷಕ ಡಾ. ಎ ಸುಬ್ರಹ್ಮಣ್ಯೇಶ್ವರ ರಾವ್ ಅವರು ಸಂಜಯ್ ಗಾಂಧಿ ಆಸ್ಪತ್ರೆ ಮತ್ತು ವಾಣಿ ವಿಲಾಸ ಆಸ್ಪತ್ರೆಗೆ ಭೇಟಿ ನೀಡಿದರು.