Thursday, December 19, 2024

ಯತೀಂದ್ರ ಆಸೆಯಂತೆ ಮೈಸೂರಿನಲ್ಲಿ ಬೋನ್ ಮ್ಯಾರೋ ಚಿಕಿತ್ಸೆ : ಸಿದ್ದರಾಮಯ್ಯ

ಮೈಸೂರು : ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಕೋರಿಕೆಯಂತೆ ಮೈಸೂರಿನಲ್ಲಿ ಬೋನ್ ಮ್ಯಾರೋ ಚಿಕಿತ್ಸಾ ಸೌಲಭ್ಯ ಒದಗಿಸುತ್ತೇನೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಫೆರಿಫೆರಲ್ ಕ್ಯಾನ್ಸರ್ ಕೇಂದ್ರ ಕಟ್ಟಡದ ಶಂಕುಸ್ಥಾಪನೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಯ ಬಾಲಕಿಯರ ವಿದ್ಯಾರ್ಥಿ ನಿಲಯದ ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರಿನ ನಂತರ ವೇಗವಾಗಿ ಬೆಳೆಯುತ್ತಿರುವ ನಗರ ಮೈಸೂರು. ಹೀಗಾಗಿ, ಅಗತ್ಯ ಎಲ್ಲಾ ರೀತಿಯ ವೈದ್ಯಕೀಯ ಸವಲತ್ತುಗಳನ್ನೂ ಮೈಸೂರಿಗೆ ಒದಗಿಸಬೇಕಾಗಿದ್ದು ಇದಕ್ಕೆ ನಾನು ಬದ್ಧವಾಗಿದ್ದೇನೆ. ಬಡವರಿಗೆ, ದುಡಿಯುವ ವರ್ಗಗಳಿಗೆ ಚಿಕಿತ್ಸೆ ಭಾರ ಆಗಬಾರದು. ಉಚಿತ ಅಥವಾ ಕಡಿಮೆ ಖರ್ಚಿನಲ್ಲಿ ಇವರಿಗೆ ಆರೋಗ್ಯ, ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ ಎಂದು ತಿಳಿಸಿದರು.

ಇನ್ನೂ 50 ಕೋಟಿ ರೂ. ಕೊಡುತ್ತೇವೆ

ಮೈಸೂರಿಗೆ ಜಿಲ್ಲಾ ಆಸ್ಪತ್ರೆ, ಟ್ರಾಮಾ ಸೆಂಟರ್, ಕಿದ್ವಾಯಿ ಆಸ್ಪತ್ರೆ ಕೊಟ್ಟಿದ್ದು ನಾನೇ. ಈಗಾಗಲೇ 40 ಕೋಟಿ ರೂ. ಕೂಡ ಕೊಟ್ಟಿದ್ದೇವೆ. ಇನ್ನೂ 50 ಕೋಟಿ ರೂ. ಕೊಡುತ್ತೇವೆ. ನೆಫ್ರೋಲಜಿ ಕೇಂದ್ರ ಬೇಕು ಎನ್ನುವ ಬೇಡಿಕೆಯೂ ಇದೆ. ಅದನ್ನೂ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಮೈಸೂರು ಜನರ ಋಣ ತೀರಿಸುತ್ತೇನೆ

ನಮ್ಮ ಸರ್ಕಾರ ಇರುವಾಗ ಮೈಸೂರು ನಗರಕ್ಕೆ ಅಗತ್ಯ ಇರುವ ಎಲ್ಲಾ ನೆರವನ್ನೂ ಒದಗಿಸುತ್ತೇವೆ. ಪಾರಂಪರಿಕ ನಗರದ ಹೆಮ್ಮೆಯನ್ನು ನಾವು ಉಳಿಸುತ್ತೇವೆ. ಮೈಸೂರು ಜಿಲ್ಲೆಯ ಜನರ ಋಣ ತೀರಿಸಲು ನಾವು ಬದ್ಧರಾಗಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

RELATED ARTICLES

Related Articles

TRENDING ARTICLES