Monday, December 23, 2024

ದೇವನಹಳ್ಳಿ ಸರ್ಕಾರಿ ಶಾಲೆ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟೀವ್​!

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬೆಟ್ಟಕೋಟೆ ಸರ್ಕಾರಿ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಸರ್ಕಾರಿ ಶಾಲೆ ಮಕ್ಕಳಿಗೂ ಕೋರೋನಾ ಆತಂಕ ಹೆಚ್ಚಾಗಿದೆ.

ಕೋವಿಡ್​ ಪಾಸಿಟೀವ್ ಬಂದ ಹಿನ್ನೆಲೆ ಶಾಲಾ ಮಕ್ಕಳಿಗೆ ತಾಲೂಕು ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ವಿದ್ಯಾರ್ಥಿಗಳ ಗಂಟಲು ದ್ರವ ಮಾದರಿ ರ್ಯಾಟ್ ಮತ್ತು ಆರ್ಟಿಪಿಸಿಆರ್ ಟೆಸ್ಟ್ ಮಾಡಲಾಗುತ್ತಿದೆ. ಇದುವರೆಗೆ
99 ಜನ ಮಕ್ಕಳ ಗಂಟಲು ದ್ರವ ಸಂಗ್ರಹಿಸಲಾಗಿದೆ.

ಇದನ್ನೂ ಓದಿ: ದೊಡ್ಡಬಳ್ಳಾಪುರದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಜನತೆ!

ಈ ಪರೀಕ್ಷೆಯಲ್ಲಿ ಇದುವರೆಗೂ ಯಾವುದೇ ಮಕ್ಕಳಲ್ಲಿ ಕಂಡು ಕೋವಿಡ್ ಲಕ್ಷಣಗಳು ಕಂಡು ಬಂದಿಲ್ಲ ಎಂದು ದೇವನಹಳ್ಳಿ ತಾಲೂಕು ಆರೋಗ್ಯಾಧಿಕಾರಿಗಳಾದ ಸಂಜಯ್​ ಮಾಹಿತಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES