Monday, December 23, 2024

ಹಾಲಿನ ದರ ಹೆಚ್ಚಳದ ಪ್ರಸ್ತಾಪವಿಲ್ಲ

ಬೆಂಗಳೂರು : ಹಾಲಿನ ದರ ಹೆಚ್ಚಳದ ಪ್ರಸ್ತಾಪವಿಲ್ಲ ಎಂದು ಕೆಎಂಎಫ್​ ಸ್ಪಷ್ಟಪಡಿಸಿದೆ.

ನಂದಿನಿ ಬ್ರ್ಯಾಂಡ್​ನ ಹಾಲು, ಮೊಸರು ಸೇರಿದಂತೆ ವಿವಿಧ ಉತ್ಪನ್ನಗಳ ದರವನ್ನು ಹೆಚ್ಚಿಸುವ ಪ್ರಸ್ತಾವನೆಯನ್ನು ಸಿಎಂ ಸಿದ್ದರಾಮಯ್ಯನವರ ಮುಂದೆ ಮಂಡಿಸಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ.

ಹಾಲು ಉತ್ಪಾದಕರ ಹಾಗೂ ಗ್ರಾಹಕರ ಸಮಸ್ಯೆಗಳ ಬಗ್ಗೆ ನಾವು ತಿಳಿದುಕೊಂಡಿದ್ದೇವೆ. ಕಳೆದ ಆಗಸ್ಟ್​ ತಿಂಗಳಿನಲ್ಲಿ ಹಾಲು, ಮೊಸರು ದರವನ್ನು ಏರಿಸಿರುವುದರಿಂದ ಸದಸ್ಯಕ್ಕೆ ಮತ್ತೆ ದರ ಹೆಚ್ಚಿಸುವುದು ಸಮಂಜಸವಲ್ಲ ಅಂತ ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ನಾವು ನಂದಿನಿ ಬ್ರ್ಯಾಂಡ್​ನ ಮೂರು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಿದ್ದೇವೆ. ಎಮ್ಮೆಯ ಮೊಸರನ್ನು ಮಾರಾಟ ಮಾಡಲು ತೀರ್ಮಾನಿಸಿದ್ದೇವೆ. ಆಗಸ್ಟ್ 1ರಂದು ಹಾಲಿನ ದರ 3 ರೂ. ಹೆಚ್ಚಳ ಮಾಡಿದ್ದೇವೆ. ಅದನ್ನು ನೇರವಾಗಿ ರೈತರಿಗೆ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES