Sunday, December 22, 2024

ಸಾರಿಗೆ ನೌಕರರಿಗೆ 1.20 ಕೋಟಿ ಅಪಘಾತ ವಿಮೆ : ರಾಮಲಿಂಗಾರೆಡ್ಡಿ

ಬೆಂಗಳೂರು : ಸಾರಿಗೆ ನೌಕರರಿಗೆ 1.20 ಕೋಟಿ ರೂ. ಅಪಘಾತ ವಿಮೆ ಯೋಜನೆ ತರಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಕಲ್ಯಾಣ‌ ಕರ್ನಾಟಕ‌ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗಾಗಿ ಪ್ರೀಮಿಯಂ ರಹಿತ 1.20 ಕೋಟಿ ವಿಮಾ ಯೋಜನೆಗೆ ಚಾಲನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಸಾರಿಗೆ ನಿಗಮದ ಸಿಬ್ಬಂದಿಗೆ ಇತ್ತೀಚಿನ ದಿನಗಳಲ್ಲಿ ಅಪಘಾತದಿಂದಾಗಿ ಆಗುತ್ತಿರುವ ಸಾವು-ನೋವಿನ ಪ್ರಮಾಣ ಗಮನಿಸಲಾಗುವುದು. ನೌಕರರು ವೈಯಕ್ತಿಕ, ಕರ್ತವ್ಯ ನಿರತ ಸಮಯದಲ್ಲಿ ಅಪಘಾತದಿಂದಾಗಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ, ಅಂಗನ್ಯೂನ್ಯತೆಗೆ ಒಳಗಾದಲ್ಲಿ ಸಿಬ್ಬಂದಿಗಳಿಗೆ ಗಣನೀಯ ಮೊತ್ತದಷ್ಟು ಹಣ ದೊರೆಯುವಂತೆ ಮಾಡುವ ಉದ್ದೇಶ ನಮ್ಮದು. ಹೀಗಾಗಿ, ಯೂನಿಯನ್ ಬ್ಯಾಕ್ ಆಫ್ ಇಂಡಿಯಾ ರವರೊಂದಿಗೆ Union Super Salary Account (USSA) ಯೋಜನೆಯ ಸೌಲಭ್ಯ ನೀಡಲು ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ದೇಶದ ಸಾರಿಗೆ ನಿಗಮಗಳಲ್ಲಿ ಮೊದಲ ಬಾರಿಗೆ 1.20 ಕೋಟಿಗಳ ಅಪಘಾತ ವಿಮೆ ಸಾರಿಗೆ ನೌಕರರಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾರಿಗೆ ತರಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ವೇಳೆ ವ್ಯವಸ್ಥಾಪಕ ನಿರ್ದೇಶಕರಾದ ರಾಚಪ್ಪ, ಎಸ್. ಭರತ್, ಡಾ.ಕೆ. ನಂದಿನಿ ದೇವಿ, ನವನೀತ್ ಕುಮಾರ್, ನಾಗಭೂಷಣ ಜಿ.ಆರ್, ನಾಗರಾಜ್ ದೇಶನೂರು ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES