ಬೆಂಗಳೂರು: ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸೋದಕ್ಕೆ ಬಿಡೋದಿಲ್ಲ, ಈ ಬಗ್ಗೆ ಅಗತ್ಯ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಮಕ್ಕಳಿಂದ ಶೌಚಾಲಯ ಶುಚಿ ವಿಚಾರ ಸರಿಯಲ್ಲ. ಯಾವ ಕಾರಣಕ್ಕೂ ಆ ರೀತಿ ಮಾಡಿಸಬಾರದು. ಈಗ ನಾನು ವಿಧಾನಸೌಧದಲ್ಲಿ ಸಭೆ ಕರೆದಿದ್ದೇನೆ. ನನಗೆ ವಿಚಾರ ಗೊತ್ತಾಗಿದೆ. ಮೂರು ಗಂಟೆಗೆ ಸಭೆ ಕರೆದಿದ್ದೇನೆ. ವರದಿ ತರಿಸಿಕೊಳ್ಳುತ್ತಿದ್ದೇನೆ. ನಿನ್ನೆಯೂ ಇದೇ ರೀತಿ ಘಟನೆ ಆದಾಗ ಕಾನೂನು ಕ್ರಮ ಕೈಗೊಂಡಿದ್ದೆವು ಎಂದು ಹೇಳಿದರು.
ಇದನ್ನೂ ಓದಿ: ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ತೇಲುತ್ತಿದ್ದಾರೆ: ವಿಜಯೇಂದ್ರ ಲೇವಡಿ
ಮಕ್ಕಳಿಗೆ ಶಕ್ತಿಕೊಡುವ ಕೆಲಸ ಮಾಡಬೇಕು. ಶಾಲೆಯಲ್ಲಿ ಕಮಿಟಿ ಇದೆ. ಸ್ವಚ್ಛತೆ ಮಾಡುವ ಸಂದರ್ಭದಲ್ಲಿ ಅವರು ಕ್ರಮ ವಹಿಸಬೇಕು. ಮಕ್ಕಳನ್ನು ದುರುಪಯೋಗ ಮಾಡುವುದನ್ನು ತಡೆಯಬೇಕಿದೆ. ಎನ್‌ಎಸ್‌ಎಸ್ ಆ ಜಾಗವನ್ನು ಸ್ವಚ್ಛತೆ ಮಾಡುವುದು, ಗಿಡ ನೆಡುವುದನ್ನು ಮಾಡುತ್ತಿದ್ದರು. ಈಗ ಶೌಚಾಲಯ ಸ್ವಚ್ಛತೆ ಮಾಡುವುದಕ್ಕೆ ಬಿಡೋದಿಲ್ಲ. ಮುಂದಕ್ಕೂ ಬಿಡುವುದಿಲ್ಲ. ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಂದರಹಳ್ಳಿ ಸರ್ಕಾರಿ ಶಾಲೆಯಲ್ಲಿ ಇಂಥದ್ದೊಂದು ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದ್ದು, ಈ ಶಾಲೆಯಲ್ಲಿ ಒಟ್ಟು 600 ಜನ ಮಕ್ಕಳಿದ್ದಾರೆ. ಅಲ್ಲದೆ, ಇಲ್ಲಿ ಮಕ್ಕಳೇ ಶೌಚಾಲಯವನ್ನು ಕ್ಲೀನ್ ಮಾಡಬೇಕು. ಅಲ್ಲದೆ, ಮಕ್ಕಳೇ ಶಿಕ್ಷಕರು ಊಟ ಮಾಡುವ ತಟ್ಟೆ ತೊಳೆಯಬೇಕು ಎಂಬ ಅಲಿಖಿತ ಕಾನೂನನ್ನು ಜಾರಿ ಮಾಡಲಾಗಿದೆ ಎಂಬ ದೂರುಗಳು ಕೇಳಿಬಂದಿವೆ.