Sunday, December 22, 2024

ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಚತೆ: ಪೋಷಕರು ಪ್ರತಿಭಟನೆ

ಬೆಂಗಳೂರು: ಕೋಲಾರ ಜಿಲ್ಲೆಯಲ್ಲಿ ಶಾಲಾಮಕ್ಕಳಿಂದ ಶೌಚಗುಂಡಿ ಸ್ವಚ್ಚಗೊಳಿಸಿದ ಪ್ರಕರಣ ಮಾಸುವ ಬೆನ್ನೆಲ್ಲೇ ಅಂಥದ್ದೇ ಮತ್ತೊಂದು ಪ್ರಕರಣ ಬಯಲಿಗೆ ಬಂದಿದೆ.

ಬೆಂಗಳೂರಿನ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು,  ಸದ್ಯ ಶಾಲಾ ಮಕ್ಕಳು ಶೌಚಾಲಯದಲ್ಲಿ ಆ್ಯಸಿಡ್​ ಬಾಟಲ್ ಮತ್ತು ಬ್ಲೀಚಿಂಗ್​ ಪೌಡರ್ ಹಿಡಿದು ಸ್ವಚ್ಚಗೊಳಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕ ವಲಯಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ: ಸೇನಾ ಟ್ರಕ್​ ಮೇಲೆ ಉಗ್ರರ ಅಟ್ಟಹಾಸ: ಮುಂದುವರಿದ ಕಾರ್ಯಾಚರಣೆ!

ಶಾಲಾ ಮಕ್ಕಳು ಶೌಚಾಲಯ ಸ್ವಚ್ಚಗೊಳಿಸಿದ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರ ಅಸಮಾಧಾನ ವ್ಯಕ್ತಪಡಿಸಿದ್ದು ಶಾಲೆಯ ಮುಂದೆ ಜಮಾಯಿಸಿ ಶಿಕ್ಷಕರ ವಿರುದ್ದ ಪ್ರತಿಭಟಿಸಿದ್ದಾರೆ.

RELATED ARTICLES

Related Articles

TRENDING ARTICLES