Wednesday, January 22, 2025

ಸಿಎಂ ವಿರುದ್ದ ಸ‘ಮಜಾವಾದಿ’ ಸಿದ್ದರಾಮಯ್ಯನವರ ಜೀವನ’ ಎಂದು ಕಿಡಿ ಕಾರಿದ ಯತ್ನಾಳ್​!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್​ ಅಹ್ಮದ್​​​ ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದರ ಹಿನ್ನೆಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​​​ ಕಿಡಿಕಾರಿದ್ದಾರೆ.

ಇತ್ತೀಚಿಗೆ ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಐಷಾರಾಮಿ ಖಾಸಗಿ ವಿಮಾನದಲ್ಲಿ ಪ್ರಯಾಣಿಸಿದ್ದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿರುವ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅಧಿಕಾರಕ್ಕೆ ಬಂದು ಆರು ತಿಂಗಳು ಮುಗಿದರೂ ಒಂದೇ ಒಂದು ಗುಂಡಿ ಮುಚ್ಚುವ ಕಾಮಗಾರಿ ಕೂಡ ನಡೆದಿಲ್ಲ ಎಂದು ಕಿಡಿಕಾರಿದೆ.

ಈ ಕುರಿತು ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ಇದು ಸ”ಮಜಾವಾದಿ”ಸಿದ್ದರಾಮಯ್ಯನವರ ಸಾಮಾನ್ಯ ಜೀವನ. ಶಾಲಾ ಮಕ್ಕಳು ಬಸ್ಸುಗಳು ಸಿಗದೇ ನೇತಾಡಿಕೊಂಡು BMTC ಹಾಗೂ KSRTC ಬಸ್​ಗಳಲ್ಲಿ ಓಡಾಡ್ತಾರೆ. ಸರ್ಕಾರದ ಯೋಜನೆಗಳಿಗೆ ಅನುದಾನಗಳ ಕೊರತೆ. ಶಾಲೆಗಳ ನವೀಕರಣಕ್ಕೆ ಹಣದ ಕೊರತೆ ಹಾಗೂ ಕಾಂಗ್ರೆಸ್ ಭಾಗ್ಯಗಳಿಗೇ ಅನುದಾನದ ಕೊರತೆ ಉಂಟಾಗಿದೆ. ಇದರ ಮಧ್ಯೆ ಸಿದ್ದರಾಮಯ್ಯ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಚತೆ: ಪೋಷಕರು ಪ್ರತಿಭಟನೆ

ಇನ್ನೂ ಇದೇ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.

“ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಜನರ ದುಡ್ಡು ಆಕಾಶದಲ್ಲಿ ಜಾತ್ರೆ”. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂಥಾ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು ಪ್ರದರ್ಶಿಸಿಕೊಳ್ಳುತ್ತಿರುವ ಸಚಿವ

ಸಚಿವ ಜಮೀರ್​ ಅಹ್ಮದ್ ಅವರ ಜೊತೆ ಜನರ ತೆರಿಗೆ ಹಣ ವ್ಯಯಿಸಿ ಐಶಾರಾಮಿ ಜೆಟ್ ವಿಮಾನದಲ್ಲಿ ಪ್ರಯಾಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮೋಜಿನ ಭಾಗವಾಗಿರುವುದು ಈ ರಾಜ್ಯದ ದೌರ್ಭಾಗ್ಯವಲ್ಲದೇ ಮತ್ತಿನ್ನೇನು ಅಲ್ಲ. ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನ ಗಳನ್ನು ನೋಡಿದರೆ “ರೋಮ್ ದೊರೆ ನೀರೋ” ಉಲ್ಲೇಖಿಸುವ ಬದಲು “ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ.” ಎಂದು ವರ್ಣಿಸಬಹುದಾಗಿದೆ ಎನ್ನುವ ಮೂಲಕ ಕಿಡಿಕಾರಿದ್ದಾರೆ.

RELATED ARTICLES

Related Articles

TRENDING ARTICLES