Wednesday, January 22, 2025

ಹಿಜಾಬ್ ನಮ್ಮ ಹಕ್ಕು, ಹಿಜಾಬ್ ವಾಪಸ್ ಬಂದೇ ಬರುತ್ತೆ : ಸಿಎಂಗೆ ಸಲಾಂ ಎಂದ ಮುಸ್ಕಾನ್

ಮಂಡ್ಯ : ನಮ್ಮ‌ ಹಕ್ಕನ್ನು ವಾಪಸ್ ಕೊಟ್ಟಿರೋದಕ್ಕೆ ಧನ್ಯವಾದ. ನಮ್ಮ ಸಂಸ್ಕೃತಿಯನ್ನು ಬೆಂಬಲಿಸಿದ್ದಾರೆ. ನಾವು ಅಣ್ಣ-ತಮ್ಮಂದರ ರೀತಿ ಕಾಲೇಜಿಗೆ ಹೋಗಿ ಓದುತ್ತಾ ಇದ್ವಿ. ಅದೇ ರೀತಿ ನಾವು ಹೋಗಬೇಕಿದೆ ಎಂದು ಹಿಜಾಬ್ ವಿವಾದ ವೇಳೆ ಹಿಜಾಬ್ ಲೇಡಿ ಎಂದು ಹೆಸರುವಾಸಿಯಾಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಹೇಳಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ನಮ್ಮ ಸಂಸ್ಕೃತಿ ನಮ್ಮ ಹಕ್ಕು. ಹಿಜಾಬ್ ಹಕ್ಕು ವಾಪಸ್ ಬರುತ್ತೆ ಎಂಬ ನಂಬಿಕೆ ಇದೆ. ಸಿಎಂ ಸಿದ್ದರಾಮಯ್ಯ, ಜಮೀರ್ ಅಹ್ಮದ್, ಯು.ಟಿ. ಖಾದರ್, ಡಿ.ಕೆ. ಶಿವಕುಮಾರ್ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಈಗ ಎಲ್ಲರೂ ಶಿಕ್ಷಣ ಪಡೆಯಬೇಕು. ಹಿಜಾಬ್ ಇದೆ ಎಲ್ಲರೂ ಬಂದು ಪರೀಕ್ಷೆ ಬರೆಯಿರಿ. ಹಿಜಾಬ್ ಎನ್ನುವುದು ನಮ್ಮ ಧರ್ಮ. ಇದನ್ನು‌ ನಾವು ಪಾಲನೆ ಮಾಡಬೇಕಾಗಿದೆ. ಹಿಜಾಬ್ ವಿವಾದದಿಂದ ಅನೇಕ ಹುಡುಗಿಯರು ಶಿಕ್ಷಣದಿಂದ ವಂಚಿತರಾಗಿದ್ದರು. ನಾನು‌ ಸಹ ಒಂದು ವರ್ಷ ಕಾಲೇಜಿಗೆ ಹೋಗಿಲ್ಲ. ಈಗ ನಾನು ಪಿಇಎಸ್ ಕಾಲೇಜಿಗೆ ಹೋಗ್ತಿನಿ. ಎಲ್ಲರೂ ಈಗ ಬಂದು ಪರೀಕ್ಷೆ ಬರೆಯಿರಿ ಎಂದು ಮನವಿ ಮಾಡಿದ್ದಾರೆ.

ಅಣ್ಣ-ತಮ್ಮಂದಿರ ರೀತಿ ಇದ್ದೇವೆ

ಶಿಕ್ಷಣದ ವಿಚಾರದಲ್ಲಿ ರಾಜಕೀಯ ಬೇಡ. ಅಣ್ಣ-ತಮ್ಮಂದಿರ ರೀತಿ ಇದ್ದೇವೆ. ಮುಂದೆಯೂ ಸಹ ಹಾಗೆಯೇ ಇರೋಣ. ನಾವು ಮೊದಲಿನಿಂದಲೂ ಹಿಜಾಬ್ ಧರಿಸುತ್ತಿದ್ದೆವು. ಎಲ್ಲಾ ಧರ್ಮವೂ ಒಂದೇ, ಮನುಷ್ಯರ ರೀತಿ ಬದುಕೋಣ. ಧರ್ಮಗಳ ನಡುವೆ ಸಂಘರ್ಷ ಬೇಡ ಎಂದು ವಿದ್ಯಾರ್ಥಿನಿ ಮುಸ್ಕಾನ್ ಹೇಳಿದ್ದಾರೆ.

RELATED ARTICLES

Related Articles

TRENDING ARTICLES