Thursday, January 16, 2025

ರಾಜ್ಯದಲ್ಲಿ ಇಂದು 104 ಜನರಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 104 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅದರಲ್ಲಿ ಬೆಂಗಳೂರಿನಲ್ಲಿಯೇ ಬರೊಬ್ಬರಿ 85 ಜನರಿಗೆ ಕೊರೊನಾ ಸೋಂಕು ಹರಡಿದೆ.

ಕಳೆದ 24 ಗಂಟೆಯಲ್ಲಿ 8 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಹಿನ್ನಲೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇಕಡಾ 5.93ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಅಂಜನಾದ್ರಿ ಬೆಟ್ಟದಲ್ಲಿ ಮೊಳಗಿದ ಅಪ್ಪು,ಮೋದಿ ಜಯಘೋಷ

ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸಿದ್ಧತೆ

ಕೊರೊನಾ ಹಾಟ್​ಸ್ಪಾಟ್​ ಆಗುತ್ತಿರುವ ಬೆಂಗಳೂರಿನ ವಾಣಿ ವಿಲಾಸ, ವಿಕ್ಟೋರಿಯಾ, ಮಿಂಟೋ ಆಸ್ಪತ್ರೆಗಳಲ್ಲಿ ಈಗಾಗಲೇ ಕೊರೊನಾ ಮುನ್ನೇಚರಿಕೆ ಕ್ರಮವಾಗಿ ಸಿ‌ದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿನಿತ್ಯ ಆಸ್ಪತ್ರೆ ಕ್ಯಾಂಪಸ್​ನಲ್ಲಿ ಸಿಬ್ಬಂದಿಗಳು RT-PCR ಟೆಸ್ಟ್ ಮಾಡುತ್ತಿದ್ದಾರೆ. ಕೊವಿಡ್ ಸೋಂಕಿತರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಪುರುಷರು, ಮಹಿಳೆಯರು, ಮಕ್ಕಳಿಗೆ ಪ್ರತ್ಯೇಕ ವಾರ್ಡ್​ ನಿರ್ಮಾಣ ಮಾಡಲಾಗಿದೆ. ಐಸಿಯುನಲ್ಲಿ 6 ಬೆಡ್​ಗಳನ್ನು ಇರಿಸಲಾಗಿದೆ. ಜೊತೆಗೆ ಚಿಕಿತ್ಸೆ ನೀಡಲು ನರ್ಸ್, ವೈದ್ಯರು, ಟೆಕ್ನಷಿಯನ್ಸ್​​​ಗಳನ್ನು ಆಸ್ಪತ್ರೆ ಹೊಂದಿದೆ.

RELATED ARTICLES

Related Articles

TRENDING ARTICLES