Friday, September 20, 2024

ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ!

ಬೆಂಗಳೂರು ಗ್ರಾಮಾಂತರ ಜಿಲ್ಲೆ: 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಕರ್ನಾಟಕ ರಾಜ್ಯದ ಅರ್ಹ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ https://Sevasindhuservices.karnataka.gov.in/sevasindhu/departmentservices ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 20 ರವರೆಗೆ ನಿಗಧಿಪಡಿಸಲಾಗಿತ್ತು. ಈ ಅವಧಿಯನ್ನು 2023 ರ ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿ ಆಗಿರಬೇಕು. ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಕ್, ಬೌದ್ಧ, ಪಾರ್ಸಿ). ವಿದ್ಯಾರ್ಥಿಯ ಕೋರ್ಸ್ ಪೂರ್ಣಕಾಲಿಕವಾಗಿರಬೇಕು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯವು ಕನಿಷ್ಠ ರೂ.6.00/- ಲಕ್ಷಗಳನ್ನು ಮತ್ತು ಗರಿಷ್ಠ ರೂ.15.00/- ಲಕ್ಷಗಳನ್ನು ಮೀರಿರಬಾರದು. ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 38 ವರ್ಷ ಮೀರಿರಬಾರದು. ಅರ್ಜಿ ಸಲ್ಲಿಸಲು 2023 ರ ಡಿಸೆಂಬರ್ 31 ಕೊನೆಯ ದಿನವಾಗಿದೆ.

ಇದನ್ನೂ ಓದಿ: 11 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಕೆ.ಹೆಚ್ ಮುನಿಯಪ್ಪ!

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಸಂಪರ್ಕಿಸುವುದು. ಜಿಲ್ಲಾ ಕಛೇರಿ, ದೇವನಹಳ್ಳಿ ದೂರವಾಣಿ ಸಂಖ್ಯೆ-080-29787455, ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ-9986874875, ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ-8660197516, ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ- 8861926851, ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ-7676905779
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ-8277799990 ಅನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES