Sunday, May 12, 2024

ಬೆಂಗಳೂರಲ್ಲಿ ಮಂಜು; ಮೈ ನಡುಗಿಸುತ್ತಿದೆ ಚಳಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆ ಮಂಜು ಕವಿದ ವಾತವರಣವಿದ್ದು ಮೈ ನಡುಗುವಂತೆ ಚಳಿ ಆವರಿಸಿದೆ. 

ರಾಜ್ಯದಲ್ಲಿಂದು ಬಹುತೇಕ ಕಡೆಗಳಲ್ಲಿ ಒಣಹವೆ ಇರಲಿದೆ. 48 ಗಂಟೆಯಲ್ಲಿ ತಾಪಮಾನ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಖ್ಯವಾಗಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಇದರಿಂದ ಚಳಿಯು ಹೆಚ್ಚಾಗಲಿದ್ದು,

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ತಾಪಮಾನ ಇಳಿಕೆ ಆಗಲಿದೆ. ಇದರಿಂದಾಗಿ ಥಂಡಿ ವಾತಾವರಣ ಇರಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ಮೈಸೂರು, ರಾಮನಗರ, ಮಂಡ್ಯ, ತುಮಕೂರು, ವಿಜಯನಗರದಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ. ಜತೆಗೆ ಕರಾವಳಿ‌ಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಒಣಹವೆ ಮೇಲುಗೈ ಸಾಧಿಸಲಿದೆ.

ಮೋಡ ಕವಿದ ವಾತಾವರಣ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಆವರಿಸಲಿದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಇರಲಿದೆ.

RELATED ARTICLES

Related Articles

TRENDING ARTICLES