Sunday, January 19, 2025

ಕೆಜೆಪಿ ಪಾರ್ಟಿ 2 ಇದ್ದಂತೆ : ಕಳ್ಳರು, ಲಫಂಗರು ಹೆಚ್ಚು ಸೇರ್ತಿದ್ದಾರೆ: ಯತ್ನಾಳ್‌ 

ವಿಜಯಪುರ: ಯಡ್ಡಿಯೂರಪ್ಪನವರದ್ದು ಕೆಜೆಪಿ 1, ಇದು ಕೆಜೆಪಿ 2, ಮೊಮ್ಮಗನದು ಕೆಜೆಪಿ 3 ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಬಿಜೆಪಿ ರಾಜ್ಯ ಘಟಕದ ನೂತನ ಪಟ್ಟಿಗೆ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈಗ ರಾಜಕೀಯದಲ್ಲಿ ಏನಾಗಿದೆ ಎಂದರೆ ಲಂಪಟರು ಬಹಳ ಇದ್ದಾರೆ. ಅವರೆಲ್ಲ ಹಲ್ಕಾ ಕೆಲಸ ಮಾಡುತ್ತಾರೆ. ಇವತ್ತು ಮೌಲ್ಯಾಧಾರಿತ ರಾಜಕಾರಣ ಇಲ್ಲ. ಎಲ್ಲಾ ಕಳ್ಳರು, ಲಫಂಗರು ಹೆಚ್ಚು ಸೇರುತ್ತಿದ್ದಾರೆ. ಒಳ್ಳೆಯವರಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಾರೆ. 2024 ರ ಚುನಾವಣೆಯ ನಂತರ ಮೇಜರ್ ಆಪರೇಷನ್ ಮಾಡದೇ ಇದ್ದರೆ ಮುಂದಿನ ನಿರ್ಣಯ ನಾನು ಮಾಡುತ್ತೇನೆ ಎಂದು ಹೇಳಿದರು.
ಈ ಪಟ್ಟಿಯ ಆಯುಷ್ಯ 2024ರ ಲೋಕಸಭೆ ಚುನಾವಣೆ. 28 ಸೀಟ್ ತರುತ್ತೇನೆ ಅಂತಾ ಹೇಳಿದ್ದಾರೆ. 28 ರಲ್ಲಿ ಒಂದು ಕಡಿಮೆ ಬಿದ್ದರೂ ಚಿಕ್ಕಮಕ್ಕಳು ಹೇಗೆ ಸಿಗರೇಟ್ ಪ್ಯಾಕ್ ಮನೆ ಮಾಡಿರ್ತಾರೆ ಆ ರೀತಿಯಾಗಿ ಈ ಪಟ್ಟಿ ಹಾಗೆ ಬಿದ್ದು ಹೋಗುತ್ತದೆ ಎಂದರು.
ಸಾರ್ವಜನಿಕ ಕೆಲಸ ಮಾಡಲು, ಕ್ರಾಂತಿ ಮಾಡಲು ಅಧಿಕಾರ ಬೇಕಾಗಿಲ್ಲ ಮತ್ತು ಇದು ಕೊನೆಯಲ್ಲ. 2028ಕ್ಕೆ ಮತ್ತೆ ಕ್ಷೇತ್ರ ಮರು ವಿಂಗಡನೆ ಆಗಲಿದೆ. ವಿಜಯಪುರದ ಲೋಕಸಭಾ ಸ್ಥಾನ ಮೂರು ಆಗಲಿದ್ದು, ಲೋಕಸಭೆಯ ಸ್ಥಾನ 900 ಆಗಲಿದೆ. ಕರ್ನಾಟಕ ವಿಧಾನಸಭೆ 290 ಸ್ಥಾನಕ್ಕೆ ಏರಿಕೆ ಆಗಲಿದೆ. ಆಗ ಏನೇನು ಆಗುತ್ತದೆ ಎಂಬುದನ್ನು ನೋಡೋಣ ಎಂದು ತಿಳಿಸಿದರು.

 

RELATED ARTICLES

Related Articles

TRENDING ARTICLES