Wednesday, January 22, 2025

ಬೆಂಗಳೂರಿನಲ್ಲಿ ಮತ್ತೆ ಹರಿದ ನೆತ್ತರು.. ಸಿನಿಮಾ ಸ್ಟೈಲ್‌ನಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಸಿನಿಮಾ ಶೈಲಿಯಲ್ಲಿ ಕಿಲೋಮೀಟರ್‌ಗಟ್ಟಲೇ ರೌಡಿಶೀಟರ್​ ಅನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದಾರೆ.

ಬೆಂಗಳೂರಿನ ಲಕ್ಕಸಂದ್ರದಲ್ಲಿ ಈ ಭಯಾನಕ ಘಟನೆ ನಡೆದಿದೆ. ಜೈಪ್ರಕಾಶ್ ಅಲಿಯಾಸ್ ಅಪ್ಪಿ ಕೊಲೆಯಾದ ರೌಡಿಶೀಟರ್. ಸಂಜೆ 7 ಗಂಟೆ ಸುಮಾರಿನಲ್ಲಿ ಐದಾರು ದುಷ್ಕರ್ಮಿಗಳ ಗುಂಪು ಅಟ್ಟಾಡಿಸಿ ಕೊಲೆ ಮಾಡಿದ್ದಾರೆ.

ಹನುಮ ಜಯಂತಿ ಹಿನ್ನೆಲೆ ಜೈಪ್ರಕಾಶ್ ಲಕ್ಕಸಂದ್ರ ಬಸ್ ನಿಲ್ದಾಣದ ಬಳಿ ಆಂಜನೇಯ ದೇವಸ್ಥಾನದಲ್ಲಿ ಅನ್ನದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. ಈ ವೇಳೆ ಐದಾರು ಜನ ಆತನನ್ನು ಗಮನಿಸಿದ್ದಾರೆ. ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ.

ಸಾರ್ವಜನಿಕರ ಮುಂದೆಯೇ ಕೊಚ್ಚಿ ಕೊಲೆ

ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳಲು ಜೈಪ್ರಕಾಶ್ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಈ ವೇಳೆ ಜೈಪ್ರಕಾಶ್​ನನ್ನು ಹಂತಕರು ಸುಮಾರು ಕಿಲೋಮೀಟರ್ ದೂರ ಅಟ್ಟಿಸಿಕೊಂಡು ಬಂದಿದ್ದಾರೆ. ಹೀಗಾಗಿ, ಆತ ಹೋಟೆಲ್ ಒಳಗೆ ಹೋಗಿದ್ದಾನೆ. ಆದರೂ ಬಿಡದೇ ಸಾರ್ವಜನಿಕರ ಮುಂದೆಯೇ ಪಾಪಿಗಳು ಆತನನ್ನು ಕೊಚ್ಚಿ ಕೊಲೆಗೈದಿದ್ದಾರೆ. ಬಳಿಕ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

ಆರೋಪಿಗಳ ಪತ್ತೆಗೆ 5 ತಂಡ ರಚೆನೆ

ಘಟನಾ ಸ್ಥಳಕ್ಕೆ ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ ಬಾಬ, ಎಫ್‍ಎಸ್‍ಎಲ್ ತಂಡ, ಶ್ವಾನ ದಳ ಹಾಗೂ ಆಡುಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಆಗ್ನೇಯ ವಿಭಾಗ ಡಿಸಿಪಿ 5 ತಂಡ ರಚನೆ ಮಾಡಿದ್ದಾರೆ.

RELATED ARTICLES

Related Articles

TRENDING ARTICLES