Sunday, December 22, 2024

ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಮೋದಿ : ಕಲ್ಲಡ್ಕ ಪ್ರಭಾಕರ್ ಭಟ್

ಮಂಡ್ಯ : ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಂದು ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮಾತನಾಡಿರುವ ಅವರು, ನಿಮಗೆ ತಲಾಕ್ ಹೇಳುವ ಅವಕಾಶ ಇತ್ತು. ಪ್ರಧಾನಿ ಮೋದಿಯವರ ಸರ್ಕಾರದಿಂದ ತ್ರಿವಳಿ ತಲಾಕ್ ರದ್ದಾಗಿದೆ ಎಂದು ತಿಳಿಸಿದರು.

ಬಹು ಪತ್ನಿತ್ವ ಪಿಡುಗು ಹಾಗೂ ತಲಾಕ್ ಕಾಟದಿಂದಾಗಿ ಈ ಹಿಮದೆ ಮುಸಲ್ಮಾನ ಹೆಣ್ಣು ಮಕ್ಳಳಿಗೆ ಶಾಶ್ವತ ಪತಿ ಇರಲಿಲ್ಲ. ದಿ ಕೇಳರ ಸ್ಟೋರಿ, ಕಾಶ್ಮೀರ ಫೈಲ್ಸ್ ಸಿನೆಮಾ ನೋಡಿ. ಮತಾಂತರ, ಹಿಂದೂಗಳ ಮೇಲಿನ ದೌರ್ಜನ್ಯ ತೋರಿಸಿದ್ದಾರೆ. ಮುಸ್ಲಿಂ ಹುಡುಗರಲ್ಲ, ಯುವತಿಯರು ಮೋಸ ಮಾಡುತ್ತಿದ್ದಾರೆ. ದಿ ಕೇರಳ ಸ್ಟೋರಿ ಮೂವಿಯಲ್ಲಿ ಈ ಬಗ್ಗೆ ತೋರಿಸಿದ್ದಾರೆ. ಮತಾಂತರ ಮಾಡಲು ಲವ್ ಜಿಹಾದ್ ಪ್ರಯತ್ನಗಳಾಗುತ್ತಿವೆ ಎಂದು ಗುಡುಗಿದರು.

ಮುಸ್ಲಿಂ ಸಮಾಜದಲ್ಲಿ ಹುಡುಗಿಯರು ಇಲ್ಲವಾ?

ಅಂಬೇಡ್ಕರ್ ದೇಶ ವಿಭಜನೆ ಮಾಡಬೇಡಿ ಅಂದಿದ್ದರು. ದೇಶವನ್ನ ಉಳಿಸಿಕೊಳ್ಳುವ ಮಹತ್ ಕಾರ್ಯ ಹಿಂದೂಗಳಿಂದ ಮಾತ್ರ ಸಾಧ್ಯ. ಮುಸ್ಲಿಂಮರಿಗೆ ಹಲವು ದೇಶಗಳು ಇವೆ. ಆದರೆ, ಹಿಂದೂಗಳಿಗೆ ಭಾರತ ಮಾತ್ರ ಇರೋದು. ಹಿಂದೂಗಳಿಗೆ ಬೇರೆ ಕಡೆ ಜಾಗ ಇಲ್ಲ. ಅದಕ್ಕಾಗಿ ನಾವು ಹೋರಾಟ ಮಾಡಬೇಕು. ಮುಸಲ್ಮಾನ್ ಹುಡುಗರು ಅಷ್ಟೇ ಅಲ್ಲ, ಮುಸ್ಲಿಂ ಮಹಿಳೆಯರು ಮತಾಂತರ ಮಾಡ್ತಿದ್ದಾರೆ. ನಿಮ್ಮ ಮುಸ್ಲಿಂ ಸಮಾಜದಲ್ಲಿ ಹುಡುಗಿಯರು ಇಲ್ಲವಾ? ಹಿಂದೂ ಹುಡುಗಿಯರನ್ನ ಯಾಕೆ ಟಾರ್ಗೆಟ್ ಮಾಡ್ತೀರಾ? ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಕಿಡಿಕಾರಿದರು.

RELATED ARTICLES

Related Articles

TRENDING ARTICLES