Monday, December 23, 2024

ಆಳ್ವಾಸ್ ಹಾಸ್ಟೆಲ್​ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು : ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಹಾಸ್ಟೆಲ್​ನಲ್ಲಿ ನಡೆದಿದೆ.

ಮನೋಜ್ (18) ಮೃತ ವಿದ್ಯಾರ್ಥಿ. ಈತ ದ್ವಿತೀಯ ಪಿಯುಸಿ ಓದುತ್ತಿದ್ದ. ಮೂಲತಃ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ತರ್ಚಿಹಾಳ ಗ್ರಾಮದವನು.

ಆಳ್ವಾಸ್ ಸಂಸ್ಥೆಯ ಹಾಸ್ಟೆಲ್ ಬಾತ್ ರೂಂನಲ್ಲಿ ಮನೋಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಪೋಷಕರಿಗೆ ಮಾಹಿತಿ ತಿಳಿಸಲಾಗಿದೆ. ತಾವು ಬರುವವರೆಗೆ ಮೃತದೇಹ ಸ್ಥಳಾಂತರಿಸದಂತೆ ಮನೋಜ್ ತಂದೆ ಮಲ್ಲಪ್ಪ ಆಗ್ರಹಿಸಿದ್ದಾರೆ.

ಈ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೋಜ್ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಏನಾಗಿತ್ತು ಎಂದು ತಿಳಿಯಲು ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲನೆ ಮಾಡಿದ್ದಾರೆ.

RELATED ARTICLES

Related Articles

TRENDING ARTICLES