Monday, December 23, 2024

1,000 ಸಂಚಿಕೆ ಪೂರೈಸಿದ ‘ಬೊಂಬಾಟ್ ಭೋಜನ’ ಶೋ

ಬೆಂಗಳೂರು : ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಬೊಂಬಾಟ್ ಭೋಜನ’ ಕಾರ್ಯಕ್ರಮ 1,000 ಸಂಚಿಕೆಯನ್ನು ಪೂರೈಸಿದೆ.

ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ನಗುವನ್ನು ಹಂಚಿದ ಸಿಹಿಕಹಿ ಚಂದ್ರು ಅವರು ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬೊಂಬಾಟ್ ಭೋಜನ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ.

ಈ ಕಾರ್ಯಕ್ರಮ ಪಾತ್ರೆಗೆ ಮಸಾಲೆ ಹಾಕಿ ಭೋಜನ ಪ್ರಿಯರಿಗೆ ರಸದೌತಣವನ್ನು ಬಡಿಸುತ್ತ ಅಮೋಘ 1,000 ಸಂಚಿಕೆಗಳನ್ನು ಯಶಸ್ವಿಯಾಗಿ ಪೂರೈಸಿದೆ. ರಾಜ್ಯದ ಮೂಲೆ ಮೂಲೆಗಳಿಂದ ಪ್ರಶಂಸೆಗಳ ಮಹಾಪೂರವೇ ಹರಿದುಬರುತ್ತಿದೆ.

ಬೊಂಬಾಟ್ ಭೋಜನದ ಮೂರನೇ ಆವೃತ್ತಿ ಇದಾಗಿದ್ದು, ಈ ಆವೃತ್ತಿಯು ಸಾಕಷ್ಟು ವೈಶಿಷ್ಟ್ಯತೆಗಳಿಂದ ತುಂಬಿದೆ. ನಮ್ಮೂರ ಊಟ, ಮನೆ ಊಟ, ಸವಿ ಊಟ, ಕೈ ರುಚಿ, ಅಂಗೈಯಲ್ಲಿ ಆರೋಗ್ಯ, ಅಂದ ಚೆಂದ ಹಾಗೂ ಅತಿಥಿ ದೇವೋಭವ ಎಂಬ ವಿಭಾಗಗಳನ್ನು ಹೊಂದಿದ್ದು ಮನೆ ಮಂದಿಯ ಮನಗೆದ್ದು ಮನೆ ಮಾತಾಗಿದೆ.

1000 ಸಂಚಿಕೆಯಲ್ಲಿ ಮಾಲಾಶ್ರೀ ಭಾಗಿ

ಹೀಗೆ ಹತ್ತು ಹಲವು ವಿಶೇಷತೆಗಳಿಂದ ಕೂಡಿರುವ ‘ಬೊಂಬಾಟ್ ಭೋಜನ ಶೋ’ 1000 ಸಂಚಿಕೆಗಳನ್ನು ಯಶಸ್ವಿಯಾಗಿ ಪೂರೈಸಿ ಹೊಸ ಮೈಲಿಗಲ್ಲು ಸೃಷ್ಟಿಸಿದೆ. ಈ ಸಾವಿರದ ಸಂಚಿಕೆಯಲ್ಲಿ ಕನಸಿನ ರಾಣಿ ಮಾಲಾಶ್ರೀ ಅವರು ವಿಶೇಷ ಅತಿಥಿಯಾಗಿ ಭಾಗಿಯಾಗಿದ್ದಾರೆ. ಈ ಸಂಚಿಕೆ ಇದೇ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

RELATED ARTICLES

Related Articles

TRENDING ARTICLES