ಬೆಂಗಳೂರು : ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದಕ್ಕೆ ಫೆಬ್ರುವರಿ 28 ಕಡೆಯ ದಿನವಾಗಿದ್ದು, ಕನ್ನಡವನ್ನು ಉಳಿಸಿ. ಕನ್ನಡತನವನ್ನು ಬೆಳೆಸುವ ಸಲುವಾಗಿ ಈ ನಿಯಮ ತರಲಾಗಿದೆ ಎಂದು ಹೇಳಿದ್ದಾರೆ.
ನಿಯಮ ಪಾಲನೆ ಮಾಡುವ ಮೂಲಕ ಹೆಮ್ಮೆಯ ಕನ್ನಡಿಗರೆನಿಸಿಕೊಳ್ಳಿ. ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು ಕನ್ನಡಿಗರೇ ಎಂದು ಭಾವಿಸಿದ್ದೇವೆ. ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ. ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ.
ಶೇ.60ರಷ್ಟು ಕನ್ನಡ ಇರಬೇಕು
ಕನ್ನಡಪರ ಸಂಘಟನೆಗಳು ದಾಳಿ ಮಾಡೋದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ಕನ್ನಡ ಸಂಘಟನೆಗಳಿಗೆ ನಾನು ರಿಕ್ವೆಸ್ಟ್ ಮಾಡುತ್ತೇನೆ. ಕಾನೂನು ಚೌಕಟ್ಟಿನಲ್ಲಿ ಹೋರಾಟ ಮಾಡೋದು ತಪ್ಪಲ್ಲ. ಕಾನೂನು ಚೌಕಟ್ಟಿನಲ್ಲಿ ಹೋರಾಡೋದು ನಮ್ಮ ಧೋರಣೆ. ಹಾಗೆ ಬೆಂಗಳೂರಿನಲ್ಲಿ ಬಂದು ಬದುಕುತ್ತಿರುವರು ವ್ಯವಹಾರ ಮಾಡುತ್ತಿರುವವರಿಗೆ ಕಾನೂನು ಇದೆ. ಬೋರ್ಡ್ನಲ್ಲಿ ಶೇ.60ರಷ್ಟು ಕನ್ನಡ ಇರಬೇಕು ಅದನ್ನೇ ಪಾಲನೆ ಮಾಡಬೇಕು ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು “ಕನ್ನಡಿಗ”ರೇ ಎಂದು ಭಾವಿಸಿದ್ದೇವೆ.
ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ.
ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ… pic.twitter.com/lX3RPTfhDM
— CM of Karnataka (@CMofKarnataka) December 25, 2023