Thursday, December 26, 2024

ರೈತರ ಆತ್ಮಹತ್ಯೆ ನೆನೆದರೆ ಈಗಲೂ ನನ್ನ ಮೈ ನಡುಗುತ್ತದೆ : ಕುಮಾರಸ್ವಾಮಿ

ಬೆಂಗಳೂರು : ಪದೇ ಪದೆ ಬರಗಾಲ ಬರಲಿ ಅಂತ ರೈತರಿಗೆ ಆಸೆ. ಅವರು ಸಾಲ ಮನ್ನಾದ ನಿರೀಕ್ಷೆ ಇಟ್ಟುಕೊಳ್ಳುತ್ತಾರೆ ಎಂಬ ಸಚಿವ ಶಿವಾನಂದ ಪಾಟೀಲ್​ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸಚಿವ ಶಿವಾನಂದ ಪಾಟೀಲ್ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು ಎಂದು ಹೇಳಿದ್ದಾರೆ.

ನಾನು ಕೃಷಿ ಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

RELATED ARTICLES

Related Articles

TRENDING ARTICLES