ಮಂಡ್ಯ : ಸಕ್ಕರೆ ನಾಡು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಅದ್ದಿಹಳ್ಳಿಯಲ್ಲಿ ಅಕ್ರಮ ಪಿಯು ಪರೀಕ್ಷೆ ನಡೆಯುತ್ತಿದ್ದರೂ ಶಿಕ್ಷಣ ಇಲಾಖೆ ಗೊತ್ತಿದ್ದು ಕಣ್ಮುಚ್ಚಿ ಕುಳಿತಿದೆ.
ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಶಿಕ್ಷಣ ಇಲಾಖೆ ಅನುಮತಿ ಪಡೆಯದೆ ಪರೀಕ್ಷೆ ನಡೆಯುತ್ತಿದೆ. ಶಿಕ್ಷಣ ಇಲಾಖೆ ನಿಯಮ ಗಾಳಿಗೆ ತೂರಿ ರಜಾ ದಿನಗಳಲ್ಲಿ ಪರೀಕ್ಷೆ ನಡೆಸುತ್ತಿದ್ದರು. 16 ಮಂದಿ ಅಕ್ರಮ ಪರೀಕ್ಷೆ ಬರೆಯುತ್ತಿದ್ದರು.
ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿಯಿಂದಲೇ ನಕಲು ಮಾಡಲು ಅವಕಾಶ ನೀಡಲಾಗಿತ್ತು. ಬೆಂಗಳೂರಿನ ಭಾರತ್ ಇನ್ಸ್ಟಿಟ್ಯೂಟ್ ಆಫ್ ಸ್ಕೂಲಿಂಗ್ ಎಜುಕೇಷನ್ ವತಿಯಿಂದ ಪರೀಕ್ಷೆ ನಡೆಯುತ್ತಿತ್ತು. ಅಕ್ರಮ ಪರೀಕ್ಷಾ ಕೇಂದ್ರಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಯ ದಿಢೀರ್ ಭೇಟಿ ನೀಡಿದ್ದಾರೆ.
ಅಧಿಕಾರಿಗೆ ಸಮರ್ಪಕ ಉತ್ತರ ನೀಡದೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ತಡಬಡಾಯಿಸಿದ್ದಾರೆ. ಮೇಲಾಧಿಕಾರಿಗಳ ಗಮನಕ್ಕೆ ತರುವುದಾಗಿ ಹೇಳಿ ಅಧಿಕಾರಿ ಹೊರಟು ಹೋಗಿದ್ದಾರೆ.