Monday, December 23, 2024

ಕುಡುಕರಿಗೆ ನೋ ಎಂಟ್ರಿ ಎಂದಿದ್ದಕ್ಕೆ ಮೆಟ್ರೋ ಸಿಬ್ಬಂದಿಗೆ ಹಲ್ಲೆ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಇತ್ತೀಚೆಗೆ ನಿಯಮ ಉಲ್ಲಂಘನೆ ಹಾಗೂ ಲೈಂಗಿಕ ಕಿರುಕುಳದೊಂದಿಗೆ ಗಲಾಟೆ ಪ್ರಕರಣಗಳು ಹೆಚ್ಚು ಕಂಡು ಬರುತ್ತಿದೆ. ಸದ್ಯ ಕುಡಿದು ಮೆಟ್ರೋ ಪ್ರವೇಶಿಸಲು ಮುಂದಾದ ವ್ಯಕ್ತಿಯನ್ನು ತಡೆದಿದ್ದಕ್ಕೆ ಮೆಟ್ರೋ ಸಿಬ್ಬಂದಿಗೆ ಹೊಡೆದು ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಚಂದ್ರಶೇಖರ್‌ ಎಂಬಾತ ಮೆಟ್ರೋ ಸಿಬ್ಬಂದಿಗೆ ಹಲ್ಲೆ ನಡೆಸಿದವನು. ಡಿ.16ರ ರಾತ್ರಿ ದಾಸರಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದಾನೆ. ಈ ವೇಳೆ ತಪಾಸಣೆ ಮಾಡುವಾಗ ಕುಡಿದಿರುವುದು ತಿಳಿದು ಬಂದಿದೆ. ಈ ವೇಳೆ ಕುಡಿದು ಬಂದವರಿಗೆ ನಿಲ್ದಾಣದೊಳಗೆ ಅವಕಾಶವಿಲ್ಲ ಎಂದು ತಡೆದಿದ್ದಾರೆ. ಆಗ ತಾನು ರಕ್ಷಣಾ ವೇದಿಕೆಯವನು ಎಂದು ಹೇಳಿಕೊಂಡು ಬಲವಂತವಾಗಿ ಒಳ ನುಗ್ಗಲು ಮುಂದಾಗಿದ್ದಾನೆ.

ಈ ವೇಳೆ ತಡೆಯಲು ಬಂದ ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾನೆ. ಸ್ಥಳದಲ್ಲಿದ್ದವರು ಗಲಾಟೆಯನ್ನು ಬಿಡಿಸಿ ಕಳಿಸಿದ್ದಾರೆ. ಸದ್ಯ ಈತನ ವಿರುದ್ಧ ಮೆಟ್ರೋ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ್ದಾರೆ ಎಂದು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದಾರೆ. ಹಲ್ಲೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

 

RELATED ARTICLES

Related Articles

TRENDING ARTICLES