Sunday, November 17, 2024

ಯತ್ನಾಳ್​ ಮಾತನ್ನ ಯಾರೂ ಗಂಭೀರವಾಗಿ ತೆಗೆದುಕೊಳ್ಳಲ್ಲ: ಮುರುಗೇಶ್ ನಿರಾಣಿ

ಬಾಗಲಕೋಟೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ​ ಯತ್ನಾಳ್ ​ಅವರ ಮಾತನ್ನು ಯಾರೂ ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ. ಹಾದಿ ಬೀದಿಯಲ್ಲಿ ಹೋಗೋರು ಮಾತನಾಡಿದರೆ ಉತ್ತರ ಕೊಡಲು ಆಗುತ್ತದಾ? ಎಂದು ಮಾಜಿ ಸಚಿವ ಮುರುಗೇಶ್​​ ನಿರಾಣಿ ಹರಿಹಾಯ್ದರು.

ಬಾಗಲಕೋಟೆಯಲ್ಲಿ ಸುದ್ದಿಗಾರರ ಜೊತೆ ಬಿಜೆಪಿ ನೂತನ ಪದಾಧಿಕಾರಿಗಳ ಬಗ್ಗೆ ಯತ್ನಾಳ್ ಟೀಕೆ ಮಾಡಿರುವ ವಿಚಾರವಾಗಿ ಮಾತನಾಡಿ, “ಏನು ಮಾತಾಡ್ತಿದ್ದೀನಿ ಅಂತಾ ಅವರಿಗೆ ಅರ್ಥ ಆಗುತ್ತೋ ಇಲ್ವೋ ಗೊತ್ತಿಲ್ಲ. ದೀಪ ಆರುವಾಗ ಗಾಳಿಗೆ ಜಾಸ್ತಿ ಉರಿಯುತ್ತೆ” ಎಂದು ಕಿಡಿಕಾರಿದರು.

“ಇನ್ನು ಆರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬಿದ್ದುಹೋಗುತ್ತೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದ ಜನ ರೊಚ್ಚಿಗೆದ್ದಿದ್ದಾರೆ. ಈ ಸರ್ಕಾರ ಹಿಂದೂಗಳಿಗೆ ತಾರತಮ್ಯ ಮಾಡುತ್ತಿದೆ. ಈ​ ಸರ್ಕಾರವನ್ನು ಕಿತ್ತೊಗೆಯಲು ಜನ ಎದುರು ನೋಡುತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್ ಸರ್ಕಾರ ಕೋಮಾದಲ್ಲಿದೆ. ಅದರ ಬಗ್ಗೆ ಮಾತನಾಡಿ ನಾವೇಕೆ ಪಾಪ ಕಟ್ಟಿಕೊಳ್ಳುವ ಕೆಲಸ‌ ಮಾಡಬೇಕು” ಎಂದು ಲೇವಡಿ ಮಾಡಿದರು.

“ಇಡೀ ಜಗತ್ತಿನಲ್ಲಿ ನಮ್ಮದು ಹಿಂದೂ ರಾಷ್ಟ್ರ. ಅಂತಹ ಭಾರತ ದೇಶದಲ್ಲಿ ಯಾರನ್ನು ಓಲೈಸುತ್ತಾರೆ ಅನ್ನೋದು ನಿತ್ಯ ನೋಡುತ್ತಿದ್ದೇವೆ. ಮುಸ್ಲಿಂ ಬಾಂಧವರಿಗೆ 10 ಸಾವಿರ ಕೋಟಿ ಮೀಸಲು ಇಡುತ್ತೇನೆ ಅಂತ ಹೇಳುತ್ತಿದ್ದಾರೆ. ಹಿಂದೂಗಳು ಏನು ಪಾಪ ಮಾಡಿದ್ದಾರೆ. ಹಿಂದೂಗಳಿಗೆ ಒಂದು ರೂಪಾಯಿನೂ ಘೋಷಣೆ ಮಾಡದ ಈ ಸರ್ಕಾರವನ್ನ ಕಿತ್ತು ಒಗೆಯಲು ಜನರು ತುದಿಗಾಲಿನಲ್ಲಿ ನಿಂತಿದ್ದಾರೆ” ಎಂದು ಹೇಳಿದರು.

 

RELATED ARTICLES

Related Articles

TRENDING ARTICLES