Wednesday, December 18, 2024

ಗೃಹಲಕ್ಷ್ಮಿ ಹಣ ಸಿಗದೆ ಇರುವ ಮಹಿಳೆಯರಿಗೆ ನೆರವು: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ.27 ರಿಂದ 29 ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರ ಆಯೋಜಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಆಧಾರ್ ಜೋಡಣೆ, ಬ್ಯಾಂಕಿಗೆ ಸಂಬಂಧಿಸಿದ ತೊಂದರೆ, ಇ-ಕೆವೈಸಿ ಅಪ್ಡೆಟ್, ಹೊಸ ಬ್ಯಾಂಕ್ ಖಾತೆ ಆರಂಭ ಸೇರಿದಂತೆ ಹಲವು ಸಮಸ್ಯೆಗಳಿಂದಾಗಿ ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಹಲವು ಮಹಿಳೆಯರು ತೊಂದರೆ ಎದುರಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಈ ತೊಂದರೆಗಳನ್ನು ಪರಿಹರಿಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ಜಮಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಈ ಶಿಬಿರ ಸಜ್ಜುಗೊಳಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಹೊಸವರ್ಷ ಸಂಭ್ರಮಕ್ಕೆ ಮಳೆ ಅಡ್ಡಿ: ಹವಾಮಾನ ಇಲಾಖೆ ಮುನ್ಸೂಚನೆ!

ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಮೂರು ದಿನಗಳ ಕಾಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಈ ಶಿಬಿರಗಳನ್ನು ಆಯೋಜಿಸಲಾಗುವುದು, ಬಾಪೂಜಿ ಸೇವಾ ಕೇಂದ್ರದ ಗಣಕಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು ಮತ್ತು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ (ಇ.ಡಿ.ಸಿ) ತಂಡಗಳು ಈ ಶಿಬಿರಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ

RELATED ARTICLES

Related Articles

TRENDING ARTICLES