Saturday, August 23, 2025
Google search engine
HomeUncategorizedಹೊಸವರ್ಷ ಸಂಭ್ರಮಕ್ಕೆ ಮಳೆ ಅಡ್ಡಿ: ಹವಾಮಾನ ಇಲಾಖೆ ಮುನ್ಸೂಚನೆ!

ಹೊಸವರ್ಷ ಸಂಭ್ರಮಕ್ಕೆ ಮಳೆ ಅಡ್ಡಿ: ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರು: ಹೊಸವರ್ಷ ಸಂಭ್ರಮಾಚರಣೆಗೆ ಮಳೆ ಅಡ್ಡಿಯಾಗಿದ್ದು ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ 31 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಚಳಿ ಮುಂದುವರೆದಿದೆ.

ಇದನ್ನೂ ಓದಿ: 100 ಕೋಟಿ ಕ್ಲಬ್​ ಸೇರಿದ ‘ಡಂಕಿ’!

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಮುಸುಕುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂದಿನ 48 ಗಂಟೆಗಳಲ್ಲಿ ಅಂದರೆ ಮಂಗಳವಾರದಂದು ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟ ಮಂಜು ಕಾಣಿಸಲಿದೆ. ಭಾಗಶಃ ಮೋಡ ಕವಿದ ವಾತಾವರಣವೂ ಇರಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments