ಬೆಂಗಳೂರು : ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಬ್ಯಾಟರ್ಗಳು ರನ್ ಗಳಿಸುವಲ್ಲಿ ವಿಫಲರಾಗಿದ್ದಾರೆ.
ಮೊದಲ ದಿನ ಊಟದ ವಿರಾಮಕ್ಕೆ ಭಾರತ 26 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 91 ರನ್ ಕಲೆಹಾಕಿತ್ತು. ಇದೀಗ 121 ರನ್ ಗಳಿಗೆ ಪ್ರಮುಖ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ.
ಭಾರತದ ಆರಂಭಿಕ ಬ್ಯಾಟರ್ಗಳಾದ ನಾಯಕ ರೋಹಿತ್ ಶರ್ಮಾ 5, ಯಶಸ್ವಿ ಜೈಸ್ವಾಲ್ 17 ರನ್ಗಳಿಗೆ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಶುಭ್ಮನ್ ಗಿಲ್ ಕೇವಲ 2 ರನ್ಗೆ ನಿರ್ಗಮಿಸಿದರು. ವಿರಾಟ್ ಕೊಹ್ಲಿ 38 ಹಾಗೂ ಶ್ರೇಯಸ್ ಅಯ್ಯರ್ 31 ರನ್ ಗಳಿಸಿ ತಂಡಕ್ಕೆ ಕೊಂಚ ಚೇತರಿಕೆ ನೀಡಿದರಾದರೂ ಹರಿಣಗಳ ವಿರುದ್ಧ ಹೆಚ್ಚು ಹೊತ್ತು ಘರ್ಜಿಸಲಿಲ್ಲ.
ದಕ್ಷಿಣ ಆಫ್ರಿಕಾ ಪರ ಕಗಿಸೊ ರಬಾಡ 4 ಹಾಗೂ ನಾಂಡ್ರೆ ಬರ್ಗರ್ 2 ವಿಕೆಟ್ ಪಡೆದು ಭಾರತಕ್ಕೆ ದೊಡ್ಡ ಆಘಾತ ನೀಡಿದರು. ಆರ್. ಅಶ್ವಿನ್ 8 ರನ್ ಗಳಿಸಿ ಔಟಾದರು. ಸದ್ಯ ಕೆ.ಎಲ್ ರಾಹುಲ್ ಅಜೇಯ 14 ಹಾಗೂ ಶಾರ್ದೂಲ್ ಠಾಕೂರ್ ಅಜೇಯ 6 ರನ್ ಗಳಿಸಿ ಕ್ರೀಸ್ನಲ್ಲಿದ್ದಾರೆ.
ಭಾರತ ತಂಡ
ರೋಹಿತ್ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿ.ಕೀ.), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ
ದಕ್ಷಿಣ ಆಫ್ರಿಕಾ ತಂಡ
ಟೆಂಬಾ ಬವುಮಾ (ನಾಯಕ), ಡೀನ್ ಎಲ್ಗರ್, ಐಡೆನ್ ಮಾರ್ಕ್ರಾಮ್, ಟೋನಿ ಡಿ ಝೋರ್ಝಿ, ಕೀಗನ್ ಪೀಟರ್ಸನ್, ಡೇವಿಡ್ ಬೆಡಿಂಗ್ಹ್ಯಾಮ್, ಕೈಲ್ ವೆರ್ರೆನ್ನೆ (ವಿ.ಕೀ), ಮಾರ್ಕೊ ಯಾನ್ಸೆನ್, ಜೆರಾಲ್ಡ್ ಕೊಯೆಟ್ಝಿ, ಕಗಿಸೊ ರಬಾಡ, ನಾಂಡ್ರೆ ಬರ್ಗರ್