Wednesday, January 22, 2025

ಸಂಸದ ಪ್ರತಾಪ್‌ ಸಿಂಹ ವಿರುದ್ಧ FIR ದಾಖಲು

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೇವರಾಜ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕಾಂಗ್ರೆಸ್‌ ಕಾರ್ಯಕರ್ತರು ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 504, 153ರ ಅಡಿಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಭಾನುವಾರ, ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರತಾಪ್ ಸಿಂಹ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಮಾರಿ ಸಿದ್ದ ಎಂದು ಅವಹೇಳನಕಾರಿಯಾಗಿ ಮೂದಲಿಸಿದ್ದರು. ಅಲ್ಲದೆ, ಸಿದ್ದರಾಮಯ್ಯ ಜಾತಿ-ಜಾತಿಗಳ ನಡುವೆ ದ್ವೇಷ ಬಿತ್ತುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: PSI ಹಗರಣ: HDK ಸೇರಿ ಹಲವರಿಗೆ ಕೋರ್ಟ್​ ನೋಟಿಸ್!

ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಮೈಸೂರು ಗ್ರಾಮಾಂತರ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಬಿ.ಜೆ ವಿಜಯಕುಮಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

RELATED ARTICLES

Related Articles

TRENDING ARTICLES