Monday, December 23, 2024

ಘಾಟಿ ದನಗಳ ಜಾತ್ರೆ: ಜಾನುವಾರುಗಳಿಗೆ ಉಚಿತ ಮೇವು ವಿತರಣೆ!

ದೊಡ್ಡಬಳ್ಳಾಪುರ: ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಅಂಗವಾಗಿ ನವ ಕರ್ನಾಟಕ ಯುವ ಶಕ್ತಿ ವೇದಿಕೆ ಆಯೋಜಿಸಿರುವ ಉಚಿತ ಜಾನುವಾರು ಮೇವು ವಿತರಣಾ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್.ಎಸ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ದನಗಳ ಜಾತ್ರೆಗೆ ಸರ್ಕಾರದ ವತಿಯಿಂದ ಉಚಿತ ನೀರು ಮತ್ತು ಆಹಾರ ವ್ಯವಸ್ಥೆ ಮಾಡಿದ್ದೇವೆ ಇದರ ಜೊತೆಗೆ ಸ್ಥಳೀಯ ಸಂಘಟನೆ ನವ ಕರ್ನಾಟಕ ಯುವಶಕ್ತಿ ವೇದಿಕೆಯವರು ಉಚಿತ ಜಾನುವಾರು ಮೇವು ನೀಡುತ್ತಿರುವುದರಿಂದ ರೈತರಿಗೆ ಬಹಳಷ್ಟು ಅನುಕೂಲವಾಗಿದೆ. ಜಾತ್ರೆಯ ರೈತರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಇದನ್ನೂ ಓದಿ: ಮುಸ್ಲಿಂ ಮಹಿಳೆಯ ಕುರಿತು ಅಕ್ಷೇಪಾರ್ಹ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ FIR

ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಚ್.ಅಪ್ಪಯ್ಯಣ್ಣ ಮಾತನಾಡಿ ಬರಗಾಲದಿಂದ ಈ ವರ್ಷ ರೈತರು ತೀವ್ರ ನಷ್ಟದಲ್ಲಿದ್ದಾರೆ ಹಾಗೂ ಮೇವಿನ ಕೊರತೆ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ನವ ಕರ್ನಾಟಕ ಯುವಶಕ್ತಿ ವೇದಿಕೆ ಈ ಕಾರ್ಯಕ್ರಮ ಕೇವಲ ದಾನ ಕಾರ್ಯವಲ್ಲದೆ ರೈತ ಸಮುದಾಯವನ್ನು ಬೆಂಬಲಿಸುವ ಗುರಿ ಹೊಂದಿರುವುದು ನಿಜವಾಗಿಯೂ ಶ್ಲಾಘನೀಯ ಎಂದರು.

ವೇದಿಕೆ ಅಧ್ಯಕ್ಷ ಹಳ್ಳಿ ರೈತ ಅಂಬರೀಶ್ ಮಾತನಾಡಿ ಇಂದು ಉದ್ಘಾಟನೆಯಾಗಿರುವ ಮೇವು ಮತ್ತು ನೀರು ವಿತರಣಾ ಕಾರ್ಯಕ್ರಮ ಇನ್ನೂ ಮೂರು-ನಾಲ್ಕು ದಿನ ಮುಂದುವರಿಯುತ್ತದೆ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳ ರೈತರಿಗೆ ಆದ್ಯತೆ ನೀಡಲು ತೀರ್ಮಾನಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಚ್ ಅಪ್ಪಯ್ಯಣ್ಣ, ರಾಜ್ಯ ತೆಂಗು ನಾರು ಮಂಡಳಿ ಅಧ್ಯಕ್ಷ ವೆಂಕಟೇಶ್ ಬಾಬು, ನವ ಕರ್ನಾಟಕ ಯುವಶಕ್ತಿ ವೇದಿಕೆ ಕಾರ್ಯದರ್ಶಿ ಉದಯ ಆರಾಧ್ಯ, ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್ ಎಸ್, ಬೆಸ್ಕಾಂ ಎಇಇ ಇನಾಯತ್ ಉಲ್ಲಾ ಖಾನ್, ಘಾಟಿ ದೇವಾಲಯ ಕಾರ್ಯನಿರ್ವಹಣಾ ಅಧಿಕಾರಿ ನಾಗರಾಜು, ತೂಬಗೆರೆ ಹೋಬಳಿ ಕಂದಾಯ ನಿರೀಕ್ಷಕ ಲಕ್ಷ್ಮೀನರಸಿಂಹಯ್ಯ, ಘಾಟಿ ಗ್ರಾಮ ಪಂಚಾಯಿತಿ ಸದಸ್ಯ ಅಪ್ಪಯ್ಯಪ್ಪ, ನಾರಾಯಣಸ್ವಾಮಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷರಾದ ಪ್ರಸನ್ನ, ತಾಲೂಕು ಅಧ್ಯಕ್ಷರಾದ ಕಾಡುನೂರು ಮೂರ್ತಿ, ರೈತ ಮುಖಂಡರಾದ ಶಿರವಾರ ಗಂಗರಾಜು, ತುರುವನಳ್ಳಿ ವಾಸು, ತಾಲೂಕು ಪಂಚಾಯಿತಿ ಸದಸ್ಯ ಸುನಿಲ್, ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ ಮುಖಂಡರಾದ ಸುಧೀರ್, ವೇದಿಕೆಯ ಪದಾಧಿಕಾರಿಗಳು ಹಾಗೂ ಸದಸ್ಯರು ರೈತರು ಭಾಗವಹಿಸಿದ್ದರು.

RELATED ARTICLES

Related Articles

TRENDING ARTICLES