Monday, December 23, 2024

ಶಾಸಕ ಜನಾರ್ದನ ರೆಡ್ಡಿ ಕಾಟೇಜ್ ಗೆ ಬೆಂಕಿ

ಕೊಪ್ಪಳ: ಕೆಆರ್​ಪಿಪಿ ಅಧ್ಯಕ್ಷ ಜನಾರ್ದನ ರೆಡ್ಡಿ ಅವರ ಕಾಟೇಜ್‌ನಲ್ಲಿ ಇಂದು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಗಂಗಾವತಿ ತಾಲೂಕಿನ ಪಂಪಾಸರೋವರ ಬಳಿ ಇರುವ ಕಾಟೇಜ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು,ಇದು ಕಿಡಿಗೇಡಿಗಳ ಕೃತ್ಯ ಇರಬಹುದು ಎಂದು ರೆಡ್ಡಿ ಬೆಂಬಲಿಗರು ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಯ್ಯಪ್ಪ ಭಕ್ತಾದಿಗಳು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಓರ್ವ ಸಾವು

ರೆಡ್ಡಿ ಅವರ ಖಾಲಿ ಕಾಟೇಜ್‌ನಲ್ಲಿ ಬೆಂಕಿ ಕಾಣಸಿಕೊಂಡಿದ್ದು, ಅಪರಿಚಿತ ವ್ಯಕ್ತಿಯೊಬ್ಬರು ಉದ್ದೇಶಪೂರ್ವಕವಾಗಿ ಬೆಂಕಿ ಹಾಕಿರಬಹುದು ಎಂಬ ಅನುಮಾನ ಅವರ ಅಭಿಮಾನಿಗಳಲ್ಲಿ ಮೂಡಿದೆ.
ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದ್ದಾರೆ.

ಖಾಲಿ ಕಾಟೇಜ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಆಸ್ತಿ ಹಾನಿಯ ಹೊರತಾಗಿ ಯಾವುದೇ ಜೀವ ಹಾನಿ ಅಥವಾ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

 

 

 

RELATED ARTICLES

Related Articles

TRENDING ARTICLES