Monday, May 20, 2024

ಹೊಸ ವರ್ಷಾಚರಣೆಗೆ ನಂದಿಬೆಟ್ಟಕ್ಕೆ ನೋ ಎಂಟ್ರಿ!

ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದ್ದು, ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ನಂದಿ ಹಿಲ್ಸ್​​ಗೆ ಸಾರ್ವಜನಿಕರ ಪ್ರವೇಶ ಮತ್ತು ಹೊಸ ವರ್ಷ ನಿಮಿತ್ತ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ. ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ಓದಿ: ಮುಸ್ಲಿಂ ಮಹಿಳೆಯ ಕುರಿತು ಅಕ್ಷೇಪಾರ್ಹ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ FIR

ಡ್ರಿಂಕ್ ಆಂಡ್ ಡ್ರೈವ್ ಅಪಘಾತ ತಡೆಯುವ ಉದ್ದೇಶದಿಂದ ಮತ್ತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ನಂದಿಗಿರಿಧಾಮದಲ್ಲಿ ಡಿಸೆಂಬರ್​ 31ರಂದು ರೂಮ್ ಬುಕಿಂಗ್ ಸಹ ರದ್ದುಪಡಿಸಲಾಗಿದೆ. ನಂದಿಗಿರಿಧಾಮದ ಸುತ್ತಮುತ್ತ ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.

RELATED ARTICLES

Related Articles

TRENDING ARTICLES