Tuesday, May 21, 2024

PSI ಹಗರಣ: HDK ಸೇರಿ ಹಲವರಿಗೆ ಕೋರ್ಟ್​ ನೋಟಿಸ್!

ಬೆಂಗಳೂರು: ಪಿಎಸ್ ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ವೀರಪ್ಪ ನೇತೃತ್ವದ ವಿಚಾರಣಾ ಆಯೋಗವು ಮಾಜಿ ಮುಖ್ಯಮಂತ್ರಿ ಸೇರಿದಂತೆ ಹಲವು ರಾಜಕಾರಣಿಗಳಿಗೆ ನೋಟಿಸ್​ ಜಾರಿ ಮಾಡಿದೆ.

ಈ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಡಿಸಿಎಂ ಡಾ. ಸಿ.ಎನ್.ಅಶ್ವತ್ ನಾರಾಯಣ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಶಾಸಕ ಬಸವರಾಜ ದಡೇಸುಗೂರ್ ಅವರಿಗೆ ನೊಟೀಸ್ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಇದನ್ನೂ ಓದಿ: ನೆಲಮಂಗಲದಲ್ಲಿ ಬೆಳ್ಳಂ ಬೆಳಗ್ಗೆ ಸರಣಿ ಅಪಘಾತ!: 30 ಜನರಿಗೆ ಗಂಭೀರ ಗಾಯ

ಹೆಚ್.ಡಿ.ಕುಮಾರಸ್ವಾಮಿ ಮತ್ತಿತರರು ಪಿಎಎಸ್ ಐ ನೇಮಕಾತಿ ಹಗರಣದ ಸಂಬಂಧ ತಮ್ಮ ಬಳಿ ಮಹತ್ವದ ದಾಖಲೆಗಳಿವೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ ನಾರಾಯಣ ಅವರ ಸಹೋದರ ಸಂಬಂಧಿ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಹಾಗಾಗಿ ನ್ಯಾಯಮೂರ್ತಿ ವೀರಪ್ಪ ಆಯೋಗವು ಇವರಿಗೆ ನೊಟೀಸ್ ಜಾರಿ ಮಾಡಿದ್ದು, ಖುದ್ದಾಗಿ ಇಲ್ಲವೇ ವಕೀಲರ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

RELATED ARTICLES

Related Articles

TRENDING ARTICLES