ನವದೆಹಲಿ: ಜನವರಿ 14 ರಿಂದ ಮಣಿಪುರದಿಂದ ಮುಂಬೈಗೆ 6,200 ಕಿಮೀ ಪಾದಯಾತ್ರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೈಗೊಳ್ಳಲಿದ್ದಾರೆ. ‘ಭಾರತ ನ್ಯಾಯ ಯಾತ್ರೆ’ಯು ಲೋಕಸಭೆ ಚುನಾವಣೆಗೆ ಮುನ್ನ ಮಾರ್ಚ್ 20 ರಂದು ಮುಕ್ತಾಯಗೊಳ್ಳಲಿದೆ.
ದಕ್ಷಿಣದಿಂದ ಉತ್ತರಕ್ಕೆ ‘ಭಾರತ್ ಜೋಡೋ ಯಾತ್ರೆ’ ಮಾಡಿ ಗಮನ ಸೆಳೆದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈಗ ಪೂರ್ವ-ಪಶ್ಚಿಮ ಭಾಗಗಳಲ್ಲಿ ಯಾತ್ರೆ ಮಾಡಲು ಸಜ್ಜಾಗಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರೊಂದಿಗೆ 14 ರಾಜ್ಯಗಳು ಮತ್ತು 85 ಜಿಲ್ಲೆಗಳನ್ನು ಸುತ್ತಲಿದ್ದಾರೆ ಎಂದು ಕಾಂಗ್ರಸ್ ಹೇಳಿದೆ.
ಇದನ್ನೂ ಓದಿ: ಮಗುವಿನ ಮೇಲೆ ಹರಿದ ಇನೋವಾ ಕಾರು!: ಮಗು ಧಾರುಣ ಸಾವು
ಈ ಪಾದಯಾತ್ರೆಯೂ ಮಣಿಪುರ ದಿಂದ ಆರಂಭವಾಗಿ ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಛತ್ತೀಸ್‌ಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ನಡೆಯಲಿದೆ.
ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮತ್ತೆ ಪಾದಯಾತ್ರೆ ಕೈಗೊಳ್ಳಲು ರಾಹುಲ್ ಗಾಂಧಿ ಮುಂದಾಗಿದ್ದಾರೆ. ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ.