ಬೆಂಗಳೂರು: ಹೊಸ ವರ್ಷಾಚರಣೆಗೆ ರಾಜ್ಯ ರಾಜಧಾನಿ ಬೆಂಗಳೂರು ಸಿದ್ದವಾಗುತ್ತಿದೆ. ಅದರಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸರು ತಯಾರಿ ನಡೆಸುತ್ತಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರರು, ಹೊಸ ವರ್ಷಾಚರಣೆ ವೇಳೆ ಜನರ ಸುರಕ್ಷತೆ ನಮ್ಮ ಆದ್ಯ ಕರ್ತವ್ಯ. ಯಾವುದೇ ಕಾರಣಕ್ಕೂ ಮಹಿಳೆ ಮತ್ತು ಮಕ್ಕಳಿಗೆ ಸಮಸ್ಯೆ ಆಗಬಾರದು. ಅಹಿತಕರ ಘಟನೆ ನಡೆಯದಂತೆ ಸೂಕ್ತ ವ್ಯವಸ್ಥೆಗಳನ್ನು ಮಾಡುತ್ತಿದ್ದೇವೆ ಎಂದರು.
ಇದನ್ನೂ ಓದಿ: ಕನ್ನಡಿಗ ಕೆ.ಎಲ್. ರಾಹುಲ್ ಏಕಾಂಗಿ ಹೋರಾಟ
ಭದ್ರತೆಗೆ ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರನ್ನು ನಿಯೋಜಿಸಲಾಗಿದೆ. ಓರ್ವ ಜಂಟಿ ಪೊಲೀಸ್ ಆಯುಕ್ತ, 15 ಡಿಸಿಪಿ, 45 ಎಸಿಪಿ, 160 ಪಿಐ, 600 ಸಬ್ಇನ್ಸ್ಪೆಕ್ಟರ್ಗಳು, 600 ಎಎಸ್ಐ, 1800 ಹೆಡ್ಕಾನ್ಸ್ಟೇಬಲ್ಸ್, 5,200 ಕಾನ್ಸ್ಟೇಬಲ್ಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗುವುದು ಎಂದು ತಿಳಿಸಿದರು.