Sunday, December 22, 2024

Killer BMTC : ರಸ್ತೆ ದಾಟುತ್ತಿದ್ದ ಮಹಿಳೆಯನ್ನು ಬಲಿ ಪಡೆದ ಬಿಎಂಟಿಸಿ

ಬೆಂಗಳೂರು: ರಾಜಧಾನಿಯಲ್ಲಿ ಬಿಎಂಟಿಸಿ ಬಸ್‌ಗೆ ಮತ್ತೊಬ್ಬರು ಬಲಿಯಾಗಿದ್ದಾರೆ.

ಹೌದು,ನಗರದ ಸುಬ್ಬಯ್ಯ ಸರ್ಕಲ್ ಬಳಿ ಅಪಘಾತ ಸಂಭವಿಸಿದೆ. ಪುಷ್ಪ (51) ಎಂಬಾಕೆ ಬಿಎಂಟಿಸಿಗೆ ಬಲಿಯಾದವರು.

ಘಟನೆ ನಡೆದಿದ್ದು ಹೇಗೆ..? 

ನಗರದ ಕಬ್ಬನ್ ಪೇಟೆ ನಿವಾಸಿಯಾಗಿರುವ ಪುಷ್ಪ ಮನೆಯಿಂದ ಬೇಕರಿಗೆ ತೆರಳುತ್ತಿದ್ದರು. ರಸ್ತೆ ದಾಟುವಾಗ ವೇಗವಾಗಿ ಬಂದ ಬಸ್ ಪುಷ್ಪರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪುಷ್ಪರ ತಲೆಗೆ ಗಂಭೀರ ಪೆಟ್ಟಾಗಿತ್ತು. ರಸ್ತೆಯಲ್ಲಿ ಒದ್ದಾಡುತ್ತಿದ್ದವರನ್ನು ಸ್ಥಳೀಯರು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. 

ಆದರೆ ತೀವ್ರ ರಕ್ತಸ್ರಾವ ಉಂಟಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಪುಷ್ಪ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬಸ್ ಚಾಲಕ ನಾಗರಾಜ್‌ ಎಂಬುವವರನ್ನು ಹಲಸೂರು ಗೇಟ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತ್ತರ ಮಾಡಲಾಗಿದೆ. ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

 

RELATED ARTICLES

Related Articles

TRENDING ARTICLES