Monday, December 23, 2024

ಹವಾಮಾನ ಬದಲಾವಣೆ: ಇಲ್ಲಿದೆ ಮಾಹಿತಿ!

ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗುವ ಸಾಧ್ಯತೆ ಇದ್ದು, ರಾಜ್ಯಾದ್ಯಂತ ಒಣ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹೀಗಾಗಿ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ತಾಪಮಾನ ಇಳಿಕೆ ಆಗಲಿದೆ. ಇದರಿಂದಾಗಿ ಚಳಿಯಾಗಲಿದೆ.

ಇದನ್ನೂ ಓದಿ: ಮಂತ್ರಿ ಮಾಲ್‌ಗೆ ಬೀಗ ಹಾಕಿದ BBMP!

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ಮೈಸೂರು, ರಾಮನಗರ, ಮಂಡ್ಯ, ತುಮಕೂರು, ವಿಜಯನಗರದಲ್ಲೂ ಶುಷ್ಕ ವಾತಾವರಣ ಇರಲಿದೆ.

ಕರಾವಳಿ‌ಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಒಣಹವೆ ಮೇಲುಗೈ ಸಾಧಿಸಲಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಅಲ್ಲಲ್ಲಿ ದಟ್ಟ ಮಂಜು ಇರಲಿದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

RELATED ARTICLES

Related Articles

TRENDING ARTICLES