Monday, December 23, 2024

ಮಕ್ಕಳಲ್ಲಿ ಹೆಚ್ಚಾಯ್ತು ಶೀತ, ಜ್ವರ, ಕೆಮ್ಮು!

ಚಾಮರಾಜನಗರ: ರಾಜ್ಯದಲ್ಲಿ ಕೊರೊನಾ ವೈರಸ್ ಆತಂಕ ಮತ್ತೆ ಶುರುವಾಗಿದ್ದು, ನರ್ಸಿಂಗ್ -ಮೆಡಿಕಲ್ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ಖಡಕ್ ಸೂಚನೆ ಕೊಟ್ಟಿದೆ. ಮಕ್ಕಳಲ್ಲೂ ಶೀತ, ಜ್ವರ, ಕೆಮ್ಮು ಕಾಣಿಸಿಕೊಳ್ತಿದ್ದು, ಶಾಲೆಗೆ ಗೈರಾಗ್ತಿದ್ದಾರೆ.

ಚಾಮರಾಜನಗರ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಪಾಸಿಟಿವ್ ಕೇಸ್‍ಗಳ ಸಂಖ್ಯೆ ದಿನೇ ದಿನೇ ಗಣನೀಯವಾಗಿ ಏರಿಕೆಯಾಗ್ತಿದೆ. ಈ ನಡುವೆ ಮಕ್ಕಳಲ್ಲಿ ಜ್ವರ, ಶೀತ, ಕೆಮ್ಮು ಕಾಣಿಸಿಕೊಳ್ಳುತ್ತಿರುವ ಹಿನ್ನಲೆ ಯಳಂದೂರಿನ ಬಳೆ ಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 15ಕ್ಕೂ ಹೆಚ್ಚು ಮಕ್ಕಳು ಗೈರಾಗಿದ್ದಾರೆ. 3 ದಿನದಿಂದ ಮಕ್ಕಳು ಶಾಲೆಗೆ ಬಾರದೇ ಇದ್ದರಿಂದ ಮನೆಗೆ ತೆರಳಿ ವಿಚಾರಿಸಿದಾಗ ಜ್ವರ, ಶೀತ, ಕೆಮ್ಮಿನಿಂದ ಬಳಲುತ್ತಿರೋದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ತಮಿಳು ನಟ ವಿಜಯ್​ಕಾಂತ್​ ನಿಧನ!

ಈಗಾಗಲೇ ತಜ್ಞ ವೈದ್ಯರು ಹಾಗೂ ಆರೋಗ್ಯ ಇಲಾಖೆ ನೆಗಡಿ, ಕೆಮ್ಮು ಹಾಗೂ ಜ್ವರದಿಂದ ಬಳಲುತ್ತಿರುವ ಮಕ್ಕಳನ್ನ ಶಾಲೆಗೆ ಕಳಿಸದಿರಿ ಎಂದು ಪೋಷಕರಿಗೆ ಕಿವಿ ಮಾತನ್ನ ಹೇಳಿದ್ದು, ಜೊತೆಗೆ ಶಿಕ್ಷಣ ಇಲಾಖೆ ಸುತ್ತೋಲೆ ಸಹ ಹೊರಡಿಸಿದೆ.‌

RELATED ARTICLES

Related Articles

TRENDING ARTICLES