Wednesday, January 22, 2025

ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನ

ಬೆಂಗಳೂರು: 2023-24 ನೇ ಸಾಲಿನಲ್ಲಿ ವಿವಿಧ ಘಟಕಗಳ ಸೌಲಭ್ಯ ಪಡೆಯಲು ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯ ನಮೂನೆಗಳು ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುತ್ತವೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ.

ಸೌಲಭ್ಯಗಳನ್ನು ಪಡೆಯಲು ಬೇಕಾದ ಅರ್ಹತೆಗಳೇನು?

ರೈತರು ಕನಿಷ್ಟ 1 ಎಕರೆ ಜಮೀನನ್ನು ಹೊಂದಿರಬೇಕು. ಈ ಯೋಜನೆಯು ಒಣ ವಲಯ ಕ್ಷೇತ್ರದ ರೈತರಿಗೆ ಮಾತ್ರ ಸಂಬಂಧಪಟ್ಟಿರುತ್ತದೆ.

ಕೃಷಿ ಭಾಗ್ಯದಲ್ಲಿ ಯಾವೆಲ್ಲಾ ಸವಲತ್ತು ಪಡೆಯಬಹುದು?

ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥಿನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಕೃಷಿ ಹೊಂಡದಿಂದ ನೀರು ಎತ್ತಲು ಡಿಸೇಲ್/ ಪೆಟ್ರೋಲ್ ಪಂಪ್ಸೆಟ್ ಹಾಗೂ ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು ಹನಿ) ನೀರಾವರಿ ಸೇರಿದಂತೆ ನಾನಾ ಸೌಲಭ್ಯಗಳನ್ನು ನಿಯಮಾನುಸಾರ ನೀಡಲಾಗುವುದು.

ಒಂದುವೇಳೆ ಸಂಬಂಧಪಟ್ಟ ತಾಲೂಕಿಗೆ / ಹೋಬಳಿಗೆ ನಿಗದಿಪಡಿಸಿದ ಗುರಿಗಿಂತ ಹೆಚ್ಚು ಅರ್ಜಿಗಳು ಸ್ವೀಕೃತವಾದರೆ ಲಾಟರಿ ಎತ್ತುವ ಮೂಲಕ ಫಲಾನುಭವಿಗಳನ್ನು ಗುರಿಗಳನ್ವಯ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಶಿವಮೊಗ್ಗ: ಮಕ್ಕಳ ಕೈಯಲ್ಲೇ ಶೌಚಾಲಯ ಕ್ಲೀನ್ ಮಾಡಿಸಿದ ಮುಖ್ಯ ಶಿಕ್ಷಕರು

ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ಧ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಕೃಷಿ ಭಾಗ್ಯ ಯೋಜನೆಯ ಉದ್ದೇಶವಾಗಿದ್ದು, ಮೇಲೆ ತಿಳಿಸಿದ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕು ಎಂದು ಕೊಪ್ಪಳ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES