Sunday, December 22, 2024

ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ!

ಚಿತ್ರದುರ್ಗ: ಪಾಳು ಬಿದ್ದ ಮನೆಯೊಂದರಲ್ಲಿ 5 ಅಸ್ಥಿಪಂಜರಗಳು ಪತ್ತೆಯಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ಚಿತ್ರದುರ್ಗದ ಚಳ್ಳಕೆರೆ ಟೋಲ್ ಗೇಟ್ ಬಳಿಯ ಹಳೆ ಬೆಂಗಳೂರು ರಸ್ತೆ ಮಾರ್ಗದ ಜೈಲ್ ರಸ್ತೆಯ ಜಗನ್ನಾಥ ರೆಡ್ಡಿ ಸಮೀಲ್ ಇಂಜಿನಿಯರ್ ದೊಡ್ಡ ಸಿದ್ದವ್ವನಹಳ್ಳಿ ಎಂಬ ನಾಮಫಲಕ ಹೊಂದಿರುವ ಮನೆಯಲ್ಲಿ ಮೂರು ಅಸ್ಥಿಪಂಜರಗಳು ಪತ್ತೆಯಾಗಿದ್ದು, ಇದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ: ನಾಳೆಯಿಂದ ಮಂಗಳೂರ –ಗೋವಾ ವಂದೇ ಭಾರತ್‌ ರೈಲು ಸಂಚಾರ: ಪ್ರಧಾನಿ ಮೋದಿಯಿಂದ ಚಾಲನೆ!

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಡಿವೈಎಸ್ಪಿ ಅನಿಲ್ ಕುಮಾರ್, ಸಿಪಿಐ ನಹಿಂ ಅಹಮದ್, ಪಿಎಸ್ಐ ರಘು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಇನ್ನು ನಗರದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದೆ.

ಸ್ಥಳೀಯ ನಿವಾಸಿಗಳ ಮಾಹಿತಿ ಪ್ರಕಾರ ಈ ಘಟನೆಯಲ್ಲಿ ಮನೆಯ ನಿವಾಸಿಗಳು ನವೆಂಬರ್ 2022 ರಿಂದ ಯಾರಿಗೂ ಸಹ ಕಾಣದೆ ಇರುವುದು ಕಂಡುಬಂದಿರುತ್ತದೆಯಂತೆ. ನವೆಂಬರ್ ನಂತರದ ದಿನಗಳಲ್ಲಿ ಮನೆಯ ಸುತ್ತಮುತ್ತ ಸ್ವಲ್ಪ ದುರ್ವಾಸನೆ ಬಂದಂತಹ ಸ್ಥಿತಿಯಿತ್ತು. ನಾವು ಯಾವುದೋ ಪ್ರಾಣಿ ಸತ್ತಿರುವ ವಾಸನೆ ಬರುತ್ತದೆ ಎಂದು ತಿಳಿದುಕೊಂಡಿದ್ದೆವು ಎಂದು ಸ್ಥಳೀಯರಿಂದ ಮಾಹಿತಿ ಲಭ್ಯವಾಗಿದೆ.

RELATED ARTICLES

Related Articles

TRENDING ARTICLES