Thursday, August 21, 2025
Google search engine
HomeUncategorizedಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಗೌರವಧನ ₹5 ಸಾವಿರ ಹೆಚ್ಚಳ 

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಗೌರವಧನ ₹5 ಸಾವಿರ ಹೆಚ್ಚಳ 

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನವನ್ನು ಐದು ಸಾವಿರ ರೂ. ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಜ.1ರಿಂದಲೇ ವೇತನ ಹೆಚ್ಚಳದ ಪ್ರಯೋಜನ  ಉಪನ್ಯಾಸಕರಿಗೆ ಸಿಗಲಿದೆ ಎಂದು ಹೇಳಿದ್ದಾರೆ.

ಶುಕ್ರವಾರ ಅತಿಥಿ ಉಪನ್ಯಾಸಕರ ಪ್ರತಿಭಟನೆ ಸಂಬಂಧ ಸಂಘಟನೆಗಳ ಮುಖಂಡರ ಜೊತೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಬಳಿಕ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ಕರೆದು ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ ಸೇರಿದಂತೆ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದರು.

ವಿದ್ಯಾರ್ಹತೆ, ಅನುಭವದ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ಗೌರವಧನ ಪ್ರಸ್ತುತ ₹26.000ದಿಂದ 32,000 ಇದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 10,600 ಅತಿಥಿ ಉಪನ್ಯಾಸಕರಿಗೂ ವೇತನ ಹೆಚ್ಚಳದ ಲಾಭ ಸಮಾನವಾಗಿ ದೊರಕಲಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ 755 ಕೋಟಿ ಹೆಚ್ಚುವರಿ ಹೊರೆಯಾಗಲಿದೆ ಎಂದರು.

ನಿವೃತ್ತರಿಗೆ ₹5ಲಕ್ಷ ಧನ ಸಹಾಯ

ಅತಿಥಿ ಉಪನ್ಯಾಸಕರಾಗಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿ, 60 ವರ್ಷಕ್ಕೆ ನಿವೃತ್ತರಾಗುವ ವೇಳೆ ವರ್ಷಕ್ಕೆ 250 ಸಾವಿರದಂತೆ ಲೆಕ್ಕಹಾಕಿ 75 ಲಕ್ಷ ಧನಸಹಾಯ ನೀಡಲಾಗುವುದು. ಅದಕ್ಕಾಗಿ ₹72 ಕೋಟಿ ನಿಗದಿ ಮಾಡಲಾಗಿದೆ ಎಂದರು.

ಇದನ್ನೂ ಓದಿ: ಜೆಡಿಯು ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರದ ಸಿಎಂ ನಿತೀಶ್‌ ಕುಮಾರ್‌ ಆಯ್ಕೆ

ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರು, ಕಾಯಂ ಸಿಬ್ಬಂದಿ ಅತಿಥಿ ಉಪನ್ಯಾಸಕರನ್ನು ಗೌರವದಿಂದ ಕಾಣಬೇಕು. ತಾರತಮ್ಯ ಮಾಡಬಾರದು, ಅವರ ಗೌರವಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳಬೇಕು. ಒಮ್ಮೆ ಕೌನ್ಸೆಲಿಂಗ್‌ನಲ್ಲಿ ಆಯ್ಕೆಯಾದವರಿಗೆ ಕೆಲಸದ ಅವಧಿ ಕಡಿಮೆಯ ಕಾರಣ ನೀಡಿ ತೆಗೆದುಹಾಕುವಂತಿಲ್ಲ. 10 ತಿಂಗಳು ಗೌರವಧನ ನೀಡುವುದು ಕಡ್ಡಾಯ. ಪ್ರತಿ ತಿಂಗಳು ಒಂದು ವೇತನ ಸಹಿತ ರಜೆ ನೀಡಲು ಸಮ್ಮತಿಸಲಾಗಿದೆ.

ಪ್ರತಿ ವರ್ಷ ಕೌನ್ಸೆಲಿಂಗ್‌ಗೆ ಹಾಜರಾಗುವುದು ಕಡ್ಡಾಯವಿದ್ದರೂ, ಒಮ್ಮೆ ದಾಖಲೆ ಸಲ್ಲಿಸಿದವರು ಮತ್ತೆ ಸಲ್ಲಿಸುವ ಅಗತ್ಯವಿಲ್ಲ. ಅದಕ್ಕಾಗಿ ಹೊಸ ತಂತ್ರಜ್ಞಾನ ಬಳಕೆ ಮಾಡಲಾಗುತ್ತಿದೆ ಎಂದರು.

ನೇಮಕಾತಿಗೆ 15 ಕೃಪಾಂಕ

“ಕಾಯಂ ಮಾಡುವ ಕುರಿತು ಕಾನೂನು ತಜ್ಞರು, ಆರ್ಥಿಕ ಇಲಾಖೆ ಜತೆ ಚರ್ಚಿಸಲಾಗಿದೆ. ಕಾಯಂ ಮಾಡಲು ಕಾನೂನು ತೊಡಕುಗಳಿವೆ. ಹಾಗಾಗಿ, ಪದವಿ ಕಾಲೇಜುಗಳ 6 ಸಾವಿರ ಸಹಾಯಕ ಪ್ರಾಧ್ಯಾಪಕರ ನೇಮಕ ಮಾಡಿಕೊಳ್ಳುವಾಗ 5ವರ್ಷದಿಂದ 10 ವರ್ಷಗಳು ಕೆಲಸ ಮಾಡಿದವರಿಗೆ ವರ್ಷಕ್ಕೆ ಶೇ 3 ಅಂಕಗಳಂತೆ ಗರಿಷ್ಠ 15 ಕೃಪಾಂಕ ನೀಡಲಾಗುವುದು. ವಯೋಮಿತಿ ಸಡಿಲಿಕೆ ಕುರಿತು ಶೀಘ್ರ ನಿರ್ಧಾರ ಪ್ರಕಟಿಸಲಾಗುವುದು” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments