Wednesday, January 22, 2025

Namma Metro: ಮೆಟ್ರೋದಲ್ಲಿ ಯುವತಿಯ ಹಿಂದೆ ನಿಂತು ಲೈಂಗಿಕ ಕಿರುಕುಳ; ನಿಲ್ದಾಣದಲ್ಲಿಯೇ ಶಿಕ್ಷಕಿಗೆ ಮೈ, ಕೈ ಮುಟ್ಟಿದ ಕಾಮುಕ 

ಬೆಂಗಳೂರು: ಕುಡಿದ ಮತ್ತಿನಲ್ಲಿ ಯುವತಿಯ ಜತೆ ವ್ಯಕ್ತಿಯೊಬ್ಬ ಅಸಭ್ಯವಾಗಿ  ವರ್ತಿಸಿರುವ ಘಟನೆ ನಮ್ಮ ಮೆಟ್ರೋದಲ್ಲಿ ನಡೆದಿದೆ. 
ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಯುವತಿಯು ವೈಟ್‌ಫೀಲ್ಡ್‌ಗೆ ಹೋಗಲು ನ್ಯಾಷನಲ್ ಕಾಲೇಜು ಬಳಿ ಮೆಟ್ರೋ ಹತ್ತಿದ್ದಾಳೆ. ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಬೋಗಿಯಲ್ಲಿ ಕುಳಿತಿದ್ದ ವ್ಯಕ್ತಿಯು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಯುವತಿ ಇಳಿಯುತ್ತಿದ್ದಂತೆ ಅಸಭ್ಯವಾಗಿ ವರ್ತನೆ ಮಾಡಿದ್ದಾನೆ ಎನ್ನಲಾಗಿದೆ.
ಹಿಂದಿನಿಂದ ಯುವತಿಯ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ನಂತರ ಆಕೆಯನ್ನೇ ನೋಡುತ್ತ ನಿಂತಿದ್ದ ಎನ್ನಲಾಗಿದೆ. ಬಳಿಕ ಅಲ್ಲಿಂದ ಹೊರಟಿದ್ದಾನೆ. ಇದರಿಂದ ಭಯಗೊಂಡಿದ್ದ ಯುವತಿಯು ಕೂಡಲೇ ಮೆಟ್ರೋದಿಂದ ಇಳಿದು ಸೆಕ್ಯೂರಿಟಿ ಸಿಬ್ಬಂದಿಗೆ ವಿಚಾರವನ್ನು ತಿಳಿಸಿದ್ದಾಳೆ. ಕೂಡಲೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ.

ಕಾಮಾಕ್ಷಿಪಾಳ್ಯ ನಿವಾಸಿ ಮನೋಜ್ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಎಂದು ಗುರುತಿಸಲಾಗಿದೆ. ಯುವತಿ ದೂರಿನನ್ವಯ ಉಪ್ಪಾರಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಆರೋಪಿ ಮನೋಜ್‌ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

 

RELATED ARTICLES

Related Articles

TRENDING ARTICLES