Saturday, May 18, 2024

ಮೃತ ಬಿಎಂಟಿಸಿ ಚಾಲಕನ ಪತ್ನಿಗೆ 50ಲಕ್ಷ ರೂ. ಚೆಕ್ ವಿತರಣೆ ಮಾಡಿದ ಸಚಿವ ರಾಮಲಿಂಗಾ ರೆಡ್ಡಿ!

ಬೆಂಗಳೂರು: 2023 ಅಕ್ಟೋಬರ್ 30ರಂದು ಆಕ್ಸಿಡೆಂಟ್​ನಲ್ಲಿ ಮೃತಪಟ್ಟಿದ್ದ ಬಿಎಂಟಿಸಿ ಡ್ರೈವರ್ ಮಲ್ಲಿಕಾರ್ಜುನ ಅವರ ಹೆಂಡತಿ ರುದ್ರಮ್ಮನಿಗೆ ಇದೇ ಮೊದಲ ಬಾರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಐವತ್ತು ಲಕ್ಷ ರೂಪಾಯಿ ಚೆಕ್ ವಿತರಿಸಿದ್ದಾರೆ.

ಇದುವರೆಗೆ ಕೆಎಸ್ಆರ್​ಟಿಸಿಯಲ್ಲಿ ಕಂಡಕ್ಟರ್ ಡ್ರೈವರ್ ಹಾಗೂ ನೌಕರರು ಮೃತಪಟ್ಟರೇ ಮಾತ್ರ ಒಂದು ಕೋಟಿ ರುಪಾಯಿ ಪರಿಹಾರ ನೀಡಲಾಗುತ್ತಿತ್ತು. ಇದೀಗ ಎಚ್ಚೆತ್ತುಕೊಂಡಿರುವ ಬಿಎಂಟಿಸಿ ತನ್ನ ಸಂಸ್ಥೆಯ ನೌಕರರು ಮೃತಪಟ್ಟರೂ ಐವತ್ತು ಲಕ್ಷ ರೂಪಾಯಿ ನೀಡಲು ಮುಂದಾಗಿದೆ.

ಇದನ್ನೂ ಓದಿ: ಸಚಿವ ಮಧು ಬಂಗಾರಪ್ಪಗೆ 6.96 ಕೋಟಿ ದಂಡ ವಿಧಿಸಿದ ಕೋರ್ಟ್​!: ತಪ್ಪಿದರೇ ಜೈಲು

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಯೂನಿಯನ್ ಬ್ಯಾಂಕ್‌ನೊಂದಿಗೆ 2023 ಆಗಸ್ಟ್ 21ರಂದು ಮೂರು ವರ್ಷಗಳ ಅವಧಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಈ ಒಡಂಬಡಿಕೆಯನ್ವಯ ಯೂನಿಯನ್ ಬ್ಯಾಂಕ್ ನಲ್ಲಿ Union Super Sallary Account ಖಾತೆ ಹೊಂದಿದ ಸಿಬ್ಬಂದಿ ಕರ್ತವ್ಯ ನಿರತ ಅಥವಾ ವೈಯಕ್ತಿಕ ಅಪಘಾತದಿಂದ ಮರಣ ಹೊಂದಿದ್ದರಿಂದ ಹಲವು ಸೌಲಭ್ಯಗಳನ್ನು ನೀಡಲಿದೆ.

RELATED ARTICLES

Related Articles

TRENDING ARTICLES