Thursday, December 19, 2024

14 ಬಜೆಟ್ ಮಂಡಿಸಿರುವ ಸಿಎಂ ವಿಲವಿಲ ಒದ್ದಾಡುತ್ತಿದ್ದಾರೆ : ವಿಜಯೇಂದ್ರ

ವಿಜಯಪುರ : 14 ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಲವಿಲ ಒದ್ದಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕುಟುಕಿದರು.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಂದಿನ ದಿನಗಳಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ ಎಂದು ಕಾಂಗ್ರೆಸ್​ ಸರ್ಕಾರಕ್ಕೆ ಚಾಟಿ ಬೀಸಿದರು.

ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಕೊಟ್ಟ ಉಚಿತ ಗ್ಯಾರೆಂಟಿಗಳನ್ನು ನಿಭಾಯಿಸಲು ಇವರಿಗೆ ಆಗುತ್ತಿಲ್ಲ. ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಾಸಕರಿಗೆ ಒಂದು ರೂಪಾಯಿ ಕೂಡ ಕೊಟ್ಟಿಲ್ಲ. ನಿಮ್ಮ ಬೂಟಾಟಿಕೆ ರಾಜಕಾರಣ, ಅಲ್ಪಸಖ್ಯಾತರ ತುಷ್ಠಿಕರಣ ಬದಿಗಿಟ್ಟು ಕ್ಷೇತ್ರಗಳ ಅಭಿವೃದ್ಧಿಗೆ ಶಾಸಕರಿಗೆ ಹಣ ಕೊಡಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್​ಗೆ ಶಾಪ ಹಾಕುತ್ತಿದ್ದಾರೆ

ಕಾಂಗ್ರೆಸ್ ಸರ್ಕಾರ ಬಂದು ಏಳು ತಿಂಗಳು ಕಳೆದಿದೆ. ಕಾಂಗ್ರೆಸ್ ನೀಡಿದ ಭರವಸೆಗಳು ಜನರಲ್ಲಿ ವಿಶ್ವಾಸ ಮೂಡಿಸಿತ್ತು. ಹಾಗಾಗಿ ಕಾಂಗ್ರೆಸ್​ಗೆ ಬಹುಮತ ಸಿಕ್ಕಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರಣರಾದ ಮತದಾರರು ಕಾಂಗ್ರೆಸ್​ಗೆ ಇಂದು ಶಾಪ ಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಆರೇಳು ತಿಂಗಳಲ್ಲೇ ಜನಪ್ರಿಯತೆ ಕಳೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.

RELATED ARTICLES

Related Articles

TRENDING ARTICLES