ನವದೆಹಲಿ: ಅಸ್ಸಾಂನ ಅತ್ಯಂತ ಹಳೆಯ ಬಂಡುಕೋರರ ಗುಂಪು ಯುನೈಟೆಡ್ ಲಿಬರೇಷನ್ ಫ್ರಂಟ್ ಆಫ್ ಅಸ್ಸಾಂ ಹಾಗೂ ಕೇಂದ್ರ ಸರ್ಕಾರದ ನಡುವೆ ಶಾಂತಿ ಒಪ್ಪಂದವಾಗಿದೆ.
ನವದೆಹಲಿಯ ಗೃಹ ಸಚಿವಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಲ್ಫಾ ಬಂಡುಕೋರರ ಪ್ರಮುಖರು ಹಾಗು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಕುಮಾರ್ ಬಿಸ್ವಾ ನಡುವೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ, ಅಮಿತ್ ಷಾ, ಈ ಒಪ್ಪಂದದಿಂದಾಗಿ ಅಸ್ಸಾಂ ಮತ್ತು ಈಶಾನ್ಯ ರಾಜ್ಯಗಳಲ್ಲಿ ಬಹುಕಾಲದಿಂದ ನಡೆಯುತ್ತಿದ್ದ ಹಿಂಸಾಚಾರ ಮತ್ತು ಸಂಘರ್ಷಕ್ಕೆ ಕೊನೆಗೂ ತೆರೆಬಿದ್ದಿದೆ. ಇದು ಅಸ್ಸಾಂ ರಾಜ್ಯದ ಭವ್ಯ ಭವಿಷ್ಯದ ಮುನ್ಸೂಚನೆಯಾಗಿದೆ ಎಂದು ಸಂತೋಷ ವ್ಯಕ್ತಪಡಿಸಿದರು.
ಇದನ್ನೂ ಓದಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ!
ಉಲ್ಫಾ ಬಂಡುಕೋರರ ಪುನರ್ವಸತಿ ಸೇರಿದಂತೆ, ಅವರ ಎಲ್ಲ ಬೇಡಿಕೆಗಳನ್ನೂ ಈಡೇರಿಸಲು ಕೇಂದ್ರ ಸರ್ಕಾರ ಬದ್ದವಾಗಿದೆ. ಕೇಂದ್ರ ಸರ್ಕಾರದ ಮೇಲೆ ಉಲ್ಫಾ ನಾಯಕರು ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.