Monday, December 23, 2024

ದಲಿತ ಬಾಲಕಿ ಮೇಲೆ ಅತ್ಯಾಚಾರ; ಐವರು ಕಾಮುಕರ ಬಂಧನ

ಕೋಲಾರ: 14 ವರ್ಷದ ದಲಿತ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್‌ ತಾಲುಕಿನಲ್ಲಿ ಬೆಳಕಿಗೆ ಬಂದಿದೆ. 

ಪ್ರಕರಣದಲ್ಲಿ ಐವರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳು ಕೂಡ ದಲಿತ ಸಮುದಾಯಕ್ಕೆ ಸೇರದವರು ಎಂದು ವರದಿಯಾಗಿದೆ.

ಐವರು ಆರೋಪಿಗಳು ಸ್ನೇಹಿತರಾಗಿದ್ದು, ಬಾಲಕಿ ಮೇಲೆ ವಿವಿಧ ಸಂದರ್ಭಗಳಲ್ಲಿ ಅತ್ಯಾಚಾರ ಎಸಗಿದ್ದಾರೆ. ಐವರಲ್ಲಿ ಓರ್ವ ಆರೋಪಿ ಬಾಲಕಿಗೆ ಪರಿಚಿತನಾಗಿದ್ದ, ಪ್ರೀತಿಯ ನೆಪದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಇನ್ನಿಬ್ಬರು ಆರೋಪಿಗಳು ಬಲವಂತವಾಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರು. ಪ್ರಮುಖ ಆರೋಪಿ ಎಸಗಿದ್ದ ಅತ್ಯಾಚಾರದ ಬಗ್ಗೆ ಬಹಿರಂಗಪಡಿಸುವುದಾಗಿ ಬೆದರಿಸಿ ಇನ್ನಿಬ್ಬರು ಆರೋಪಿಗಳು ಅತ್ಯಾಚಾರ ಎಸಗಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಬೀಚ್​​ಗೆ ತೆರಳಿದ್ದ ಇಬ್ಬರು ಸಮುದ್ರ ಪಾಲು!

ಬಾಲಕಿಯ ದೇಹದಲ್ಲಾದ ಬದಲಾವಣೆಗಳನ್ನು ಕಂಡ ಪೋಷಕರು ಆಕೆಯನ್ನು ವಿಚಾರಿಸಿದಾಗ, ಸಂತ್ರಸ್ತೆ ತನ್ನ ಮೇಲಾದ ದೌರ್ಜನ್ಯಗಳ ಬಗ್ಗೆ ಹೇಳಿದ್ದಾಳೆ. ಬಳಿಕ, ಪೋಷಕರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

RELATED ARTICLES

Related Articles

TRENDING ARTICLES